ನವದೆಹಲಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಹೈಕೋರ್ಟ್ ರಿಟ್ ಅರ್ಜಿ ವಜಾಗೊಳಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವರು ಆಗ್ರಹಿಸಿದರು.
ಮಂಗಳವಾರ ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು ಈ ಒತ್ತಾಯ ಮಾಡಿದರು.
ಕಾಂಗ್ರೆಸ್ ಪಕ್ಷದ ಡಿಎನ್‌ಎಯಲ್ಲೇ ಭ್ರಷ್ಟಾಚಾರ ಇದೆ. ಸಿದ್ದರಾಮಯ್ಯ ಅವರು ಇದಕ್ಕೆ ಹೊರತಾಗಿಲ್ಲ. ನಿಯಮಗಳನ್ನು ಗಾಳಿಗೆ ತೂರಿ ಅವರು ಅಧಿಕಾರ ದುರುಪಯೋಗ ಮಾಡಿದ್ದಾರೆ. ಇಡೀ ದೇಶಕ್ಕೆ ರಾಹುಲ್ ಗಾಂಧಿ ಅವರು ನೈತಿಕತೆಯ ನಕಲಿ ಪಾಠ ಹೇಳುತ್ತಾರೆ. ನೈತಿಕತೆ ಕಳೆದುಕೊಂಡಿರುವ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ರಾಹುಲ್ ಸೂಚಿಸಬೇಕು.
-ಪ್ರಲ್ಹಾದ ಜೋಶಿ, ಕೇಂದ್ರ ಆಹಾರ ಸಚಿವ