Breaking News

ಮೌಲ್ಯಮಾಪನ ಬಹಿಷ್ಕರಿಸಿ ಅರ್ಥಶಾಸ್ತ್ರ ಉಪನ್ಯಾಸಕರ ವೇದಿಕೆ ಸದಸ್ಯರಿಂದ ಪ್ರತಿಭಟನೆ

Spread the love

ಬೆಳಗಾವಿ: ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ವಾಣಿಜ್ಯ ವಿಭಾಗದ ಅರ್ಥಶಾಸ್ತ್ರ ವಿಷಯವನ್ನು ನಿಯಮ ಬಾಹಿರವಾಗಿ ಕಡಿಮೆ ಮಾಡಿರುವ ವಿಷಯಕ್ಕೆ ಸಂಬಂಧಪಟ್ಟಂತೆ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ಉಪನ್ಯಾಸಕರ ವೇದಿಕೆ ಸದಸ್ಯರಿಂದ ಮೌಲ್ಯಮಾಪನ ಬಹಿಷ್ಕರಿಸಿ ಪ್ರತಿಭಟನೆ.

ಮೊದಲಿನಿಂದಲೂ ವಾಣಿಜ್ಯಶಾಸ್ತ್ರದಲ್ಲಿ ಅರ್ಥಶಾಸ್ತ್ರ ವಿಷಯವನ್ನು ಅಧ್ಯಯನ ವಿಷಯವಾಗಿ ಹೇಳಲಾಗಿದೆ.

 

ಅರ್ಥಶಾಸ್ತ್ರ ವಿಷಯವು ವಾಣಿಜ್ಯ ವಿಭಾಗದ ತಾಯಿಬೇರು ಇದ್ದಂತೆ ಆದರೆ ವಾಣಿಜ್ಯಶಾಸ್ತ್ರ ವಿಭಾಗದ ಕೆಲವರ ಕುತಂತ್ರದಿಂದ ಅಕ್ರಮವಾಗಿ ಅರ್ಥಶಾಸ್ತ್ರ ಶೀರ್ಷಿಕೆ ಬದಲಾವಣೆ ಮಾಡಲಾಗಿದೆ.

ಅರ್ಥಶಾಸ್ತ್ರ ಅನುದಾನಿತ ಹಾಗೂ ಅತಿಥಿ ಉಪನ್ಯಾಸಕರಿಗೆ ಕಾರ್ಯಭಾರದ ಕೊರತೆ ಆಗುವಂತೆ ಕ್ರಮ ಕೈಗೊಳ್ಳಲಾಗಿದೆ. ಇದರಿಂದ ನೂರಾರು ಉಪನ್ಯಾಸಕರು ಕೆಲಸ ಕಳೆದುಕೊಂಡು ನಿರುದ್ಯೋಗಿಗಳಾಗುತ್ತಾರೆ.

ವಾಣಿಜ್ಯ ಶಾಸ್ತ್ರದಲ್ಲಿ ಅರ್ಥಶಾಸ್ತ್ರ ವಿಷಯವನ್ನು ಅಂತರ್ ವಿಷಯಕ (ಇಂಟರ್ ಡಿಸಿಪ್ಲಿನರಿ) ಅಧ್ಯಯನವಾಗಿ ಕಡ್ಡಾಯವಾಗಿ ಕಲಿಸಬೇಕಾಗುತ್ತದೆ. ಆದರೆ ಅರ್ಥಶಾಸ್ತ್ರ ವಿಷಯವನ್ನು ಒಳಗೊಂಡ ಪಠ್ಯವನ್ನು ಕಲಿಸಲು ಉಪನ್ಯಾಸಕರಿಗೆ ನಿರಾಕರಿಸಲಾಗುತ್ತಿದೆ ಎಂದು ಉಪನ್ಯಾಸಕರ ಆರೋಪ.

ನಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೋಳಿ ಆವರನ್ನು ಭೇಟಿಯಾದ ಉಪನ್ಯಾಸಕರು ವಿವಿ ಕುಲಪತಿಗಳಿಗೆ ಕೂಡಲೇ ಅರ್ಥಶಾಸ್ತ್ರ ವಿಷಯವನ್ನು ಕಡ್ಡಾಯವಾಗಿ ಅಳವಡಿಸಲು ಸೂಚಿಸಬೇಕು ಎಂದು ಮನವಿ ಮಾಡಿದರು.


Spread the love

About Laxminews 24x7

Check Also

ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ

Spread the loveಪಂಢರಪುರದ ಗೋಪಾಲಪುರದಲ್ಲಿರುವ ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ ನೀಡಿ,ವಿಶೇಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ