Breaking News

ಸಂಭ್ರಮ ಸಡಗರದ ಶ್ರೀ ಕಾಡಸಿದ್ಧೇಶ್ವರರ ರಥೋತ್ಸವ

Spread the love

ಬಕವಿ-ಬನಹಟ್ಟಿ: ಶ್ರೀ ಕಾಡಸಿದ್ಧೇಶ್ವರ ರಥೋತ್ಸವಕ್ಕೆ ಅದ್ಧೂರಿ ಮಂಗಳವಾರ ರಾತ್ರಿ 8.00ಕ್ಕೆ ಚಾಲನೆ ದೊರೆಯಿತು. ಅದಕ್ಕೂ ಮುಂಚೆ ವಿದ್ಯುತ್‌ದೀಪ ಹಾಗೂ ಅಪಾರ ಪ್ರಮಾಣದ ಹೂವುಗಳಿಂದ ಅಲಂಕೃತವಾದ ರಥಕ್ಕೆ (ತೇರಿಗೆ) ನಗರದ ಸಮಸ್ತ ಹಿರಿಯರು ಸಂಜೆ 6 ಗಂಟೆಗೆ ಪೂಜೆ ಸಲ್ಲಿಸಿ ಕಾಯಿ ಒಡೆಯುವುದರ ಮೂಲಕ ಜಾತ್ರೆಗೆ ಚಾಲನೆ ನೀಡಿದರು.

Rabkavi Banhatti: ಸಂಭ್ರಮ ಸಡಗರದ ಶ್ರೀ ಕಾಡಸಿದ್ಧೇಶ್ವರರ ರಥೋತ್ಸವ

ಶ್ರೀ ಕಾಡಸಿದ್ಧೇಶ್ವರ ಮಹಾರಾಜ ಕಿ ಜೈ’ ಎಂಬ ಜಯಘೋಷಗಳ ಮಧ್ಯೆ ಜಾತ್ರೆಯ ಪ್ರಥಮ ದಿನ ಬಾನಂಗಳದಲ್ಲಿ ಹಾರಾಡಿದ ಪಟಾಕಿಗಳ ಸಂಭ್ರಮ, ಸಡಗರದ ನಡುವೆ ಅತಿ ವಿಜೃಂಭಣೆಯಿಂದ ನೆರವೇರಿತು.

ರಾಜ್ಯ ಮೂಲೆಗಳಿಂದ ಮತ್ತುಮಹಾರಾಷ್ಟ್ರ ಸೇರಿದಂತೆ ಹೊರ ರಾಜ್ಯ ಹಾಗೂ ವಿದೇಶಗಳಿಂದ ಭಕ್ತರು ಆಗಮಿಸಿ ರಥೋತ್ಸವಕ್ಕೆ ಬೆಂಡು, ಬೆತ್ತಾಸು, ಉತ್ತತ್ತಿ ಎಸೆದು ಕೃತಾರ್ಥರಾದರು. ರಥೋತ್ಸವದ ಮುಂದೆ ಉಚ್ಚಾಯಿ, ನಂದಿಕೋಲ, ಸಂಬಾಳವಾದನ, ಕರಡಿ ಮಜಲು, ಶಹನಾಯಿ, ಡೊಳ್ಳು ಕುಣಿತ ಸೇರಿದಂತೆ ಹಲವು ಮಂಗಳವಾದ್ಯಗಳು ರಥೋತ್ಸವದ ಮೆರಗನ್ನು ಹೆಚ್ಚಿಸಿದವು. ಸುಮಾರು 1 ಗಂಟೆಗಳ ಕಾಲ ಮಂಗಳವಾರ ಪೇಟೆಯ ಪ್ರಮುಖ ರಸ್ತೆಯಲ್ಲಿ ಸಾಗಿ ಬಂತು.

ಪಟಾಕಿ ಸಡಗರ : ಉತ್ತರ ಕರ್ನಾಟಕದಲ್ಲಿ ಮದ್ದಿನ (ಪಟಾಕಿ)ಜಾತ್ರೆಯೆಂದೇ ಪ್ರಖ್ಯಾತವಾಗಿರುವ ಬನಹಟ್ಟಿ ಶ್ರೀ ಕಾಡಸಿದ್ಧೇಶ್ವರ ಜಾತ್ರೆಗೆ ಈ ಸಲವು ದೇಶದ್ಯಾಂತ ಚದುರಿ ಹೋಗಿದ್ದ ಭಕ್ತರು ಹಾಗೂ ಸ್ಥಳೀಯರು ಇಂದು ಮಧ್ಯಾಹ್ನ 3ಗಂಟೆಯಿಂದ ಅಂದಾಜು ಲಕ್ಷಾಂತರ ರೂಗಳ (ಪಟಾಕಿ)ಮದ್ದನ್ನು ಹಾರಿಸುವುದರ ಮೂಲಕ ತಮ್ಮ ಹರಕೆಯನ್ನು ಪೂರೈಸಿಕೊಂಡರು.


Spread the love

About Laxminews 24x7

Check Also

ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ ಜೆ.ಎಂ.ಕಾಲೆಮಿರ್ಚಿ ಪುಂಡ ಎಂಇಎಸ್ ಮುಖಂಡನ ಜೊತೆಗೆ ಸೆಲ್ಪಿ

Spread the loveಕರ್ನಾಟಕ‌ ರಾಜ್ಯೋತ್ಸವದಲ್ಲಿ ಕರಾಳ ದಿನಾಚರಣೆ ಮಾಡಲು ಎಂಇಎಸ್ ಗೆ ಅನುಮತಿ ಕೊಡುವುದಿಲ್ಲ ಎಂದು ರಾತ್ರೋರಾತ್ರಿ ಈ‌ ಮೊದಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ