Breaking News

ನಾವು ಸಿದ್ದರಾಮಯ್ಯ ಪರ ಗಟ್ಟಿಯಾಗಿ ನಿಲ್ಲುತ್ತೇವೆ: ಸಚಿವ ಎಸ್ಸೆಸ್ಸೆಂ

Spread the love

ದಾವಣಗೆರೆ: ನಮಗೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ. ಅದರಲ್ಲಿ ಯಾವುದೇ ಗೊಂದಲ ಇಲ್ಲವೇ ಇಲ್ಲ ಎಂದು ಗಣಿ, ಭೂ ವಿಜ್ಞಾನ ಮತ್ತು ತೋಟಗಾರಿಕೆ ಇಲಾಖೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮುಡಾ ಹಗರಣದ ತನಿಖೆಗೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿರುವುದನ್ನ ರದ್ಧುಗೊಳಿಸಬೇಕು ಎಂಬ ಅರ್ಜಿ ಹೈಕೋರ್ಟ್‌ನಲ್ಲಿ ವಜಾ ಆಗಿರುವುದರಿಂದ ಸುಪ್ರೀಂ ಕೋರ್ಟ್‌ಗೆ ಹೋಗುತ್ತೇವೆ.

ನಾವು ಕಾಂಗ್ರೆಸ್‌ನವರು ಸ್ವಚ್ಛವಾಗಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ನಮಗೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಯಾವುದೇ ಗೊಂದಲ ಇಲ್ಲ. ಬುಧವಾರ ಸಚಿವ ಸಂಪುಟ ಸಭೆಯಲ್ಲಿ ಎಲ್ಲ ವಿಷಯಗಳ ಚರ್ಚೆ ಮಾಡುತ್ತೇವೆ. ನಾವು ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ನಿಲ್ಲುತ್ತೇವೆ ಎಂದು ತಿಳಿಸಿದರು.

ನಾವು ಕೇಳಿದವರ ವಿರುದ್ಧ ಪ್ರಾಸಿಕ್ಯೂಷನ್ ಜಾರಿ ಮಾಡಿಲ್ಲ. ಕೇವಲ ಕಾಂಗ್ರೆಸ್‌ನವರ ವಿರುದ್ಧ ಮಾತ್ರ ಪ್ರಾಸಿಕ್ಯೂಷನ್ ಜಾರಿ ಮಾಡಿದ್ದಾರೆ. ಸ್ವಚ್ಛಂದ ಆಡಳಿತ ನಡೆಸುತ್ತಿರುವವರನ್ನು ನೋಡಿ ಬಿಜೆಪಿಗರಿಗೆ ಸಹಿಸಲು ಆಗುತ್ತಿಲ್ಲ ಎಂದು ದೂರಿದರು.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ