Breaking News

ತಂಗಿಯನ್ನು ಬರ್ಬರವಾಗಿ ಕೊಲೆಗೈದು ಪೊಲೀಸರಿಗೆ ಶರಣಾದ ಅಣ್ಣ

Spread the love

ದಗ: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ತಂಗಿಯನ್ನು ಬರ್ಬರವಾಗಿ ಕೊಲೆ ಮಾಡಿದ ಅಣ್ಣನೊಬ್ಬ ನಂತರ ಪೊಲೀಸರಿಗೆ ಶರಣಾದ ಘಟನೆ ಮುಂಡರಗಿ ಪಟ್ಟಣದಲ್ಲಿ ಸೆ.24ರ ಮಂಗಳವಾರ ನಡೆದಿದೆ.

ಕಾವ್ಯಾ (32) ಮೃತಪಟ್ಟ ಮಹಿಳೆ. ಈಶಪ್ಪ ಕ್ಯಾದಗಿಹಳ್ಳಿ ಕೊಲೆ ಮಾಡಿದ ಆರೋಪಿ.

ಅನ್ಯಕೋಮಿನ ಯುವಕ ಪ್ರಶಾಂತ ಹಡಪದ (37) ಎಂಬವರ ಜೊತೆ ಮದುವೆಯಾಗಿದ್ದ ಯುವತಿ ಕಾವ್ಯಾ, ಆಸ್ತಿಗಾಗಿ ಅಣ್ಣ ಈಶಪ್ಪನ ವಿರುದ್ಧ ಕೇಸ್ ದಾಖಲಿಸಲು ಮುಂದಾಗಿದ್ದಳು.

 

ಮನೆಗೆ ಬಂದ ತಂಗಿ ಕಾವ್ಯಾ ಅಣ್ಣ ಈಶಪ್ಪನೊಂದಿಗೆ ವಾಗ್ವಾದ ನಡೆಸಿದ್ದಾಳೆ ಎನ್ನಲಾಗಿದ್ದು, ಜಗಳ ವಿಕೋಪಕ್ಕೆ ತಿರುಗಿ ಅಣ್ಣ ತಂಗಿಯನ್ನು ಮಾರಕಾಸ್ತ್ರಗಳಿಂದ ಕೊಲೆಗೈದು ತಾನೇ ಪೊಲೀಸರಿಗೆ ಶರಣಾಗಿದ್ದಾನೆ.

ಸ್ಥಳಕ್ಕೆ ಹೆಚ್ಚುವರಿ ಎಸ್ಪಿ ಎಂ.ಬಿ. ಸಂಕದ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ

Spread the loveಪಂಢರಪುರದ ಗೋಪಾಲಪುರದಲ್ಲಿರುವ ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ ನೀಡಿ,ವಿಶೇಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ