Breaking News

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ನಾಯಕರ ಪಟ್ಟು ಬಿಗಿ

Spread the love

ಬೆಂಗಳೂರು: ಮುಡಾ ಪ್ರಕರಣದಲ್ಲಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ನಾಯಕರು ವಿಧಾನಸೌಧದ ಗಾಂಧಿ ಪ್ರತಿಮೆ ಎದುರು 1 ಗಂಟೆ ಕಾಲ ಪ್ರತಿಭಟನೆ ನಡೆಸಿದರು.

ಶಾಸಕರಾದ ಅರವಿಂದ ಬೆಲ್ಲದ್‌ ವಿಧಾನಸೌಧದ ಪಶ್ಚಿಮದ್ವಾರಕ್ಕೆ ಬೀಗ ಹಾಕಲು ಯತ್ನಿಸಿದಾಗ ಪೊಲೀಸರು ಬಿಜೆಪಿ ನಾಯಕರನ್ನು ಬಂಧಿಸಿದರು.

ವಿಪಕ್ಷ ನಾಯಕ ಆರ್‌. ಅಶೋಕ್‌ ನೇತೃತ್ವದಲ್ಲಿ ಶಾಸಕರು, ಸಂಸದರು, ವಿಧಾನ ಪರಿಷತ್‌ ಸದಸ್ಯರು, ಮಾಜಿ ಶಾಸಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಅನಂತರ ಕಾಲ್ನಡಿಗೆಯಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಯಿತು.

ಆರ್‌.ಅಶೋಕ್‌ ಅವರು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ, ಸಿದ್ದರಾಮಯ್ಯನವರ ಮುಂದೆ ಈಗ ಬೇರೆ ಆಯ್ಕೆಗಳೇ ಇಲ್ಲ. ಹೈಕೋರ್ಟ್‌ ಆದೇಶ ಬಂದಿದೆ. ಯಾವ ಸೆಕ್ಷನ್‌ ಅನ್ವಯ ಪ್ರಕರಣ ದಾಖಲಿಸಬೇಕು ಎಂದೂ ನ್ಯಾಯಾಲಯ ಹೇಳಿದೆ. ಸೆಕ್ಷನ್‌ 420 ಅನ್ವಯ ಪ್ರಕರಣ ಹಾಕುವಂತೆ ನ್ಯಾಯಾಲಯ ಸೂಚನೆ ನೀಡಿದೆ. ಸದ್ಯದಲ್ಲೇ ಎಫ್‌ಐಆರ್‌ ದಾಖಲಾಗಲಿದೆ. ಹೀಗಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ