Heavy Rain: ದೇಶದ ಬಹುತೇಕ ರಾಜ್ಯಗಳಲ್ಲಿ ಮಳೆರಾಯನ ಆರ್ಭಟ ಕಡಿಮೆಯಾಗಿದೆ. ಕೆಲವು ಭಾಗಗಳಲ್ಲಿ ಮಾತ್ರ ಅಬ್ಬರಿಸಿ ಬೊಬ್ಬೆರೆಯುತ್ತಿದ್ದಾನೆ. ಹಾಗೆಯೇ ಅಕ್ಟೋಬರ್ 2ರ ವರೆಗೆ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು (ಸೆಪ್ಟೆಂಬರ್ 27) ಹಿಮಾಚಲ ಪ್ರದೇಶ, ಪೂರ್ವ ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಪ್ರತ್ಯೇಕ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನವದೆಹಲಿಯ ನರೇಲಾ, ಬವಾನಾ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಮುಂದಿನ ಒಂದು ವಾರ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ದಕ್ಷಿಣ ಭಾರತ ಹೊರತುಪಡಿಸಿ ದೇಶದಾದ್ಯಂತ ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
Rain Alert: ಈ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ
ಪಶ್ಚಿಮ ಭಾರತದ ಹವಾಮಾನದ ವಿವರ: ಕೊಂಕಣ ಮತ್ತು ಗೋವಾದಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಮಧ್ಯ ಮಹಾರಾಷ್ಟ್ರ ಮತ್ತು ಗುಜರಾತ್‌ನಲ್ಲಿ ಸೆಪ್ಟೆಂಬರ್ 29ರ ವರೆಗೆ ಅಂದರೆ ಮುಂದಿನ ಮೂರು ದಿನಗಳ ಕಾಲ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಸೆಪ್ಟೆಂಬರ್ 28ರಂದು ಮಧ್ಯ ಮಹಾರಾಷ್ಟ್ರ, ಗುಜರಾತ್‌ನ ಸೌರಾಷ್ಟ್ರ ಮತ್ತು ಕಚ್‌ನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಪೂರ್ವ ಮತ್ತು ಈಶಾನ್ಯ ಭಾರತ: ಸೆಪ್ಟೆಂಬರ್ 27, 28 & ಅಕ್ಟೋಬರ್ 2ರಂದು ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಕೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.