Breaking News

ಸಿಎಂ ಸಿದ್ದರಾಮಯ್ಯ ವಿರುದ್ಧ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್

Spread the love

ಮೈಸೂರು ಸೆಪ್ಟೆಂಬರ್ 27: ಮುಡಾ ಹಗರಣ ಸಿಎಂ ಸಿದ್ದರಾಮಯ್ಯ ಅವರ ಖುರ್ಚಿಗೆ ಕುತ್ತು ತಂದಿದೆ. ಮುಡಾ ಹಗರಣದ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಹಾಗಾದರೆ ಸಿದ್ದರಾಮಯ್ಯ ವಿರುದ್ಧ ದಾಖಲಾದ ಸೆಕ್ಷನ್‌ಗಳು ಯಾವವು?

ಸಿದ್ದರಾಮಯ್ಯ ಅವರ ಜೊತೆಗೆ ಯಾರೆಲ್ಲಾ ಹೆಸರಿನ ಮೇಲೆ ದೂರು ದಾಖಲಾಗಿದೆ?

ಸಿದ್ದರಾಮಯ್ಯ ಹಾಗೂ ಅವರ ಕುಟುಂಬಸ್ಥರನ್ನ ಮುಡಾ ಹಗರಣ ಪ್ರಕರಣ ಸಂಕಷ್ಟದಲ್ಲಿ ಸಿಲುಕಿಸಿದೆ. ಇಂದು ಮೈಸೂರಿನಲ್ಲಿ ಲೋಕಾಯುಕ್ತ ಪೊಲೀಸರು ಸಿದ್ದರಾಮಯ್ಯ ಹಾಗೂ ಅವರ ಕುಟುಂಬಸ್ಥರ ವಿರುದ್ಧ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲು ಮಾಡಿದ್ದಾರೆ.

ಎ1 ಆರೋಪಿ ಸಿದ್ದರಾಮಯ್ಯ ಎ2 ಆರೋಪಿ ಪಾರ್ವತಿ, ಎ3 ಆರೋಪಿ ಮಲ್ಲಿಕಾರ್ಜುನ ಸ್ವಾಮಿ, ದೇವರಾಜು ಅವರನ್ನು ಎ4 ಆರೋಪಿಯನ್ನಾಗಿ ದೂರು ದಾಖಲಿಸಲಾಗಿದೆ. ಸಿದ್ದರಾಮಯ್ಯ ವಿರುದ್ಧ ಐಪಿಸಿ ಸೆಕ್ಷನ್ 120 ಬಿ, 166, 403, 420, 426,465, 468, 340, 351 ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಭ್ರಷ್ಟಾಚಾರ ತಡೆ ಕಾಯ್ದೆ 1988ರಡಿಯಲ್ಲೂ ಎಫ್‌ಐಆರ್ ದಾಖಲಿಸಲಾಗಿದೆ.

ಬೇನಾಮಿ ಆಸ್ತಿ ವಹಿವಾಟು ಕಾಯ್ದೆ 1988, ಕರ್ನಾಟಕ ಭೂಮಿ ಕಬಳಿಕೆ ನಿಷೇಧ ಕಾಯ್ದೆ 2011ರ ಅನ್ವಯ ಪ್ರಕರಣ, ಸೆಕ್ಷನ್ 120 ಬಿ ಕ್ರಿಮಿನಲ್ ಪಿತೂರಿ, ಸೆಕ್ಷನ್ 166 ಸಾರ್ವಜನಿಕ ಸೇವಕ ಕಾನೂನು ಉಲ್ಲಂಘನೆ ಮಾಡುವುದು, ಸೆಕ್ಷನ್ 403 ಆಸ್ತಿಯ ದುರ್ಬಳಕೆ, ಸೆಕ್ಷನ್ 420 ವಂಚನೆ, ಸೆಕ್ಷನ್ 465 ದುಷ್ಕೃತ್ಯವೆಸಗುವುದು, ಸೆಕ್ಷನ್ 468 ವಂಚನೆ ಉದ್ದೇಶಕ್ಕಾಗಿ ದಾಖಲೆಗಳ ಪೋರ್ಜರಿ, ಸೆಕ್ಷನ್‌ 340 ಅಕ್ರಮ ಬಂಧನ, ಸೆಕ್ಷನ್ 351 ಇತರರಿಗೆ ಹಾನಿಯನ್ನುಂಟು ಮಾಡುವುದು ಸೇರಿದಂತೆ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಹೀಗೆ ಸಿದ್ದರಾಮಯ್ಯ ಅವರ ಕೊರಳಿಗೆ ಸುತ್ತಿಕೊಂಡಿರುವ ಮುಡಾ ನಿವೇಶನ ಹಂಚಿಕೆ ಉರುಳು ಇದೀಗ ಮತ್ತಷ್ಟು ಬಿಗಿಯಾಗಿದೆ. ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದ ಬೆನ್ನಲ್ಲೇ ಇಂದು ಮೈಸೂರು ಲೋಕಾಯುಕ್ತದಲ್ಲಿ ಸಿಎಂ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ನೀಡಿದ್ದ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್ಪಿ ಟಿಜೆ ಉಮೇಶ್ ಎಫ್‌ಐಆರ್ ದಾಖಲಿಸಿದ್ದಾರೆ.


Spread the love

About Laxminews 24x7

Check Also

ರಸ್ತೆಗುಂಡಿ ಮುಚ್ಚಲು ನೀಡಿದ್ದ ಗಡುವು ಅಂತ್ಯ: ‘Please ask D.K.Shivakumar’ ಎಂದ ಸಿದ್ದರಾಮಯ್ಯ

Spread the loveಬೆಂಗಳೂರು: ರಾಜಧಾನಿಯಲ್ಲಿ ಹಾಳಾಗಿರುವ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳಿಗೆ ನೀಡಿದ್ದ ಗಡುವು ಇಂದಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ