Breaking News

ಮುಡಾ ಹಗರಣವನ್ನು ‘CBI ತನಿಖೆ’ಗೆ ವರ್ಗಾಹಿಸುವಂತೆ ಕೋರಿ ‘ಹೈಕೋರ್ಟ್’ಗೆ ಅರ್ಜಿ ಸಲ್ಲಿಕೆ | CM Siddaramaiah

Spread the love

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರಿಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗುತ್ತಿದೆ. ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಕೋರ್ಟ್ ನಿರ್ದೇಶನದಂತೆ ಎಫ್‌ಐಆರ್ ದಾಖಲಿಸಿದ ಬೆನ್ನಲ್ಲೇ, ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.

 

ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಿತ್ತು. ಈ ಹಿನ್ನಲೆಯಲ್ಲಿ ಮೈಸೂರಿನ ಲೋಕಾಯುಕ್ತದಿಂದ ಎಫ್‌ಐಆರ್ ದಾಖಲಿಸಲಾಗಿದೆ.

ಇನ್ನೂ ಮುಡಾ ಪ್ರಕರಣ ಸಂಬಂಧ ಸಿಎಂ ಸಿದ್ಧರಾಮಯ್ಯ ವಿರುದ್ಧದ ದೂರುದಾರ ಸ್ನೇಹಮಯಿ ಕೃಷ್ಣ ಅವರು ಹೈಕೋರ್ಟ್ ಗೆ ಮತ್ತೊಂದು ಅರ್ಜಿಯನ್ನು ಸಲ್ಲಿಸಿದ್ದಾರೆ. ಅದರಲ್ಲಿ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವರ್ಗಾಯಿಸುವಂತೆ ಕೋರಿದ್ದಾರೆ. ಈ ಅರ್ಜಿಯನ್ನು ಹೈಕೋರ್ಟ್ ನ್ಯಾಯಪೀಠವು ಸೋಮವಾರ ವಿಚಾರಣೆಗೆ ನಡೆಸಲು ನಿಗದಿ ಪಡಿಸಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ