Breaking News

ಸಿಎಂ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ಮೇಲೆ ವಂಚನೆ ಪ್ರಕರಣ

Spread the love

ಚಾಮರಾಜನಗರ : ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ವಿರುದ್ಧದ 3 ವರ್ಷಗಳ ಹಿಂದಿನ ವಂಚನೆ ಆರೋಪ ಪ್ರಕರಣ ಸಂಬಂಧ ಇಂದು ಕೋರ್ಟ್​​ಗೆ ಕೃಷ್ಣ ಅವರು ವಿಚಾರಣೆಗೆ ಹಾಜರಾದರು.

 

 

ಕರುಣಾಕರ ಎಂಬುವವರಿಂದ ಕೃಷ್ಣ 2018, 2019 ಹಾಗೂ 2020ರಲ್ಲಿ ತಲಾ ಒಂದು ಲಕ್ಷ ರೂಪಾಯಿಯನ್ನು ಸಾಲ ಪಡೆದು ಸಾಲ ಹಿಂದುರುಗಿಸದೇ ವಂಚನೆ ಮಾಡಿರುವ ಆರೋಪದ ಪ್ರಕರಣ ಇದಾಗಿದೆ. ಈ ಬಗ್ಗೆ ಚಾಮರಾಜನಗರದ JMFC ಕೋರ್ಟ್​ಗೆ ಅವರು ವಿಚಾರಣೆ ಎದುರಿಸಿದರು.

ವಿಚಾರಣೆ ಬಳಿಕ ಪ್ರತಿಕ್ರಿಯೆ ನೀಡಿರುವ ಕೃಷ್ಣ, ನಾನು ಕೇವಲ 50 ಸಾವಿರ ರೂಪಾಯಿ ಸಾಲ ಪಡೆದಿದ್ದೆ. ಆದರೆ 3 ಲಕ್ಷ ರೂಪಾ ಸಾಲ ಪಡೆದುಕೊಂಡಿದ್ದಾಗಿ ಪ್ರಾಮಿಸರಿ ನೋಟ್ ಬರೆಸಿಕೊಂಡು, ನನ್ನ ವಿರುದ್ಧ ಸುಳ್ಳು ಕೇಸ್​ ದಾಖಲಿಸಿದ್ದರು. ಈ ಸಾಲಕ್ಕೆ ನಾನು ಬಡ್ಡಿಯೂ ಕಟ್ಟಿದ್ದೇನೆ ಎಂದಿರುವ ಅವರು, ಶೀಘ್ರವೇ ಈ ಬಗ್ಗೆ ನಿಜ ಏನು ಎಂಬುವುದು ಹೊರ ಬೀಳಲಿದೆ ಎಂದಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ