Breaking News

ಬಿಜೆಪಿಗೆ ಈಶ್ವರಪ್ಪ ಕರೆತರಲು ಯತ್ನಿಸಿಲ್ಲ: ರಮೇಶ ಜಾರಕಿಹೊಳಿ

Spread the love

ಬೆಳಗಾವಿ: ‘ನಾನು ಮತ್ತು ಶಾಸಕ ಬಸನಗೌಡ ಪಾಟೀಲ ಯತ್ನಾಳ ಸೇರಿ ಕೆ.ಎಸ್.ಈಶ್ವರಪ್ಪ ಅವರನ್ನು ಮತ್ತೆ ಬಿಜೆಪಿಗೆ ಕರೆತರಲು ಯತ್ನಿಸುತ್ತಿದ್ದೇವೆ ಎಂಬುದು ಸುಳ್ಳು. ಈಶ್ವರಪ್ಪ ಅವರನ್ನು ಪಕ್ಷದಿಂದ ಹೊರಹಾಕಿದ್ದು ರಾಷ್ಟ್ರೀಯ ನಾಯಕರು. ಸೇರಿಸಿಕೊಳ್ಳಬೇಕಾದವರೂ ಅವರೇ’ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

 

‘ಈಶ್ವರಪ್ಪ ಅವರ ಬೆಂಗಳೂರು ನಿವಾಸದಲ್ಲಿ ನಾವೆಲ್ಲ ಸೇರಿದ್ದು ನಿಜ. ಆದರೆ, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಮತ್ತು ಕುರುಬ ಸಮಾಜಕ್ಕೆ ಪರಿಶಿಷ್ಟ ಪಂಗಡ ಮೀಸಲಾತಿಯ ಬೇಡಿಕೆ ಕುರಿತು ಚರ್ಚಿಸಿದ್ದೇವೆ. ಆ ಸಭೆಯಲ್ಲಿದ್ದ ಶಾಸಕ ರಾಜು ಗೌಡ ಅವರ ಹೇಳಿಕೆ ಬರೀ ಸುಳ್ಳು’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

‘ಅದು ಬಿಜೆಪಿಯ ಭಿನ್ನಮತೀಯರ ಸಭೆಯೂ ಅಲ್ಲ. ಬಿಜೆಪಿ ಅಥವಾ ಕಾಂಗ್ರೆಸ್‌ ಕುರಿತು ರಾಜಕೀಯ ಚರ್ಚೆಯೂ ಆಗಿಲ್ಲ. ಕಾಂಗ್ರೆಸ್‌ ಸರ್ಕಾರ ಬೀಳಿಸುವಂಥ ಯಾವುದೇ ಪ್ರಯತ್ನ ಕೂಡ ಮಾಡುತ್ತಿಲ್ಲ. ಬದಲಾಗಿ, ಮುಂದಿನ ಚುನಾವಣೆಯಲ್ಲಿ ಹೇಗೆ ಬಹುಮತ ಪಡೆಯಬೇಕು ಎಂಬ ಬಗ್ಗೆ ಚಿಂತಿಸುತ್ತಿದ್ದೇವೆ. ಬಿಜೆಪಿ ರಾಜ್ಯ ಘಟದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಏನು ಮಾಡುತ್ತಿದ್ದಾರೆ ಎಂಬುದು ನಮಗೆ ಬೇಕಿಲ್ಲ. ನಮ್ಮ ಪ್ರಯತ್ನದ ಬಗ್ಗೆ ಮಾತ್ರ ಮಾತನಾಡುತ್ತೇವೆ’ ಎಂದೂ ಹೇಳಿದರು.

ತನಿಖೆಯ ಭಯ:

‘ಸಿಬಿಐಗೆ ಇದ್ದ ನೇರ ತನಿಖೆಯ ಅವಕಾಶವನ್ನು ರಾಜ್ಯ ಸರ್ಕಾರ ತಡೆದಿದೆ. ಈಗಾಗಲೇ ಡಿ.ಕೆ.ಶಿವಕುಮಾರ್‌ ಪ್ರಕರಣವನ್ನು ಸಿಬಿಐ ತನಿಖೆ ಮಾಡುತ್ತಿದೆ. ಸಿದ್ದರಾಮಯ್ಯ ಪ್ರಕರಣವೂ ತನಿಖೆಗೆ ಹೋಗಬಹುದು ಎಂಬ ಭಯದಿಂದ ಹೀಗೆ ಮಾಡಿದ್ದಾರೆ. ತನಿಖಾ ಸಂಸ್ಥೆಯನ್ನೇ ವಿರೋಧಿಸುವ ಮಟ್ಟಿಗೆ ರಾಜ್ಯ ಸರ್ಕಾರ ಹಗರಣದಲ್ಲಿ ಸಿಕ್ಕಿಕೊಂಡಿದೆ ಎಂಬುದು ಈಗ ಜಗಜ್ಜಾಹೀರು’ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರನ್ನು ಎಳೆದು, ಕಾಂಗ್ರೆಸ್‌ಗೆ ಮುಜುಗರ ಮಾಡಿದವರು ಯಾರೆಂಬುದು ಗೊತ್ತಿದೆ. ಅದನ್ನು ಸಿದ್ದರಾಮಯ್ಯ ಅರ್ಥ ಮಾಡಿಕೊಳ್ಳಬೇಕು’ ಎಂದರು.


Spread the love

About Laxminews 24x7

Check Also

ಸುವರ್ಣಸೌಧದಲ್ಲಿ ಬಾಪೂಜಿ ಜೀವನ ಚರಿತ್ರೆಯ ಅಪರೂಪದ ಫೋಟೋಗಳ ಪ್ರದರ್ಶನ

Spread the loveಬೆಳಗಾವಿ: ಕುಂದಾನಗರಿ ಈಗ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವಕ್ಕೆ ಸಜ್ಜಾಗುತ್ತಿದೆ. ಇದರ ನಡುವೆ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಸುವರ್ಣ ವಿಧಾನಸೌಧದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ