Breaking News

ದಾಖಲೆ ಇಟ್ಟರೆ 6-7 ಸಚಿವರ ತಲೆದಂಡವಾಗುತ್ತೆ: HDK

Spread the love

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನಡುವಿನ ವಾಕ್ಸಮರ ಮುಂದುವರೆದಿದೆ. ದಾಖಲೆಗಳನ್ನು ನಾನು ಮುಂದಿಟ್ಟರೆ ರಾಜ್ಯದ 6-7 ಸಚಿವರ ತಲೆದಂಡವಾಗಲಿದೆ ಎಂದು ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯ ಸಚಿವ ಸಂಪುಟದಲ್ಲಿ ಒಬ್ಬರಿಗಿಂತ ಒಬ್ಬರು ಪೈಪೋಟಿಯಲ್ಲಿ ಲೂಟಿ ಮಾಡುತ್ತಿದ್ದಾರೆ.

ನನ್ನ ಬಳಿ ಇರುವ ದಾಖಲೆಗಳನ್ನು ಬಯಲು ಮಾಡಿದರೆ ಕೊನೇಪಕ್ಷ 6ರಿಂದ 7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ. ಶೀಘ್ರದಲ್ಲಿಯೇ ಎಲ್ಲಾ ದಾಖಲೆಗಳನ್ನು ಬಿಡುತ್ತೇನೆ ಎಂದು ಹೇಳಿದರು.

ಇದೇ ವೇಳೆ ನನ್ನ ವಿರುದ್ಧ ರಾಜಕೀಯ ಪ್ರೇರಿತವಾಗಿ ಇದೇ ಮೊದಲ ಬಾರಿ ಕೇಸ್ ದಾಖಲಾಗಿದೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಸಿದ್ದರಾಮಯ್ಯ ಅವರ ವಿರುದ್ಧ ಲೋಕಾಯುಕ್ತದಲ್ಲಿ 70ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಆ ಪ್ರಕರಣಗಳ ಕಥೆ ಏನಾಗಿದೆ? ಅವುಗಳ ತನಿಖೆ ಎಲ್ಲಿಗೆ ಬಂದಿದೆ ಎಂಬುದನ್ನು ಜನರಿಗೆ ಹೇಳಬೇಕಲ್ಲವೇ? ನಾನು ಬಹಳ ಕ್ಲೀನ್, ಪಾರದರ್ಶಕ, ನನ್ನ ಜೀವನ ತೆರೆದ ಪುಸ್ತಕ ಎಂದೆಲ್ಲಾ ಹೇಳುವ ಸಿಎಂ ಸಿದ್ದರಾಮಯ್ಯನವರು ಈಗ ಕಪ್ಪು ಚುಕಿ, ಬಿಳಿ ಚುಕ್ಕಿ ಬಗ್ಗೆ ಹೇಳಲಿ ಎಂದು ಟಾಂಗ್ ನೀಡಿದರು.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ