Breaking News

ಮಹಿಷ ದಸರಾ | ಯಾರಿಗೂ ತೊಂದರೆ ಆಗದಂತೆ ಮಾಡಿಕೊಳ್ಳಬಹುದು: ಮಹದೇವಪ್ಪ

Spread the love

ಮೈಸೂರು: ‘ಯಾರಿಗೂ, ಯಾವ ತೊಂದರೆಯೂ ಆಗದಂತೆ ಯಾರು ಬೇಕಾದರೂ ಅವರವರ ಧಾರ್ಮಿಕ ಆಚರಣೆ ಮಾಡಿಕೊಳ್ಳಬಹುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಹೇಳಿದರು.

ಕೆಲವು ಪ್ರಗತಿಪರ ಸಂಘಟನೆಗಳು ಚಾಮುಂಡಿ‌ಬೆಟ್ಟದಲ್ಲಿ‌ ಭಾನುವಾರ ಹಮ್ಮಿಕೊಂಡಿರುವ ಮಹಿಷ ದಸರಾ ಆಚರಣೆ ಬಗ್ಗೆ ಶನಿವಾರ ಪ್ರತಿಕ್ರಿಯಿಸಿದ ಅವರು, ‘ಕಾರ್ಯಕ್ರಮ ಮಾಡುವವರು ಕಾನೂನು-ಸುವ್ಯವಸ್ಥೆಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕಷ್ಟೆ’ ಎಂದರು.

 

‘ಇಂಥದ್ದನ್ನು ಮಾಡಿ ಅಥವಾ ಮಾಡಬೇಡಿ ಎಂದು ಹೇಳಲು ನಾವ್ಯಾರು? ದೇಶದ ನಾಗರಿಕತೆಯಲ್ಲೇ ನೀರು, ಕಲ್ಲು, ಮಣ್ಣನ್ನು ಪೂಜಿಸುವ ಸಂಸ್ಕೃತಿ ಇದೆ. ಅವರವರ ಧಾರ್ಮಿಕ ನಂಬಿಕೆ ಅವರವರದ್ದು. ನೀವು ಮಾಡಲೇ ಬೇಡಿ ಎಂದು ವಿರೋಧಿಸುವುದಕ್ಕೆ ಯಾರಿಗೂ ಹಕ್ಕಿಲ್ಲ. ಎಲ್ಲ ಪರಿಸ್ಥಿತಿಯನ್ನೂ ಪೊಲೀಸರು ಸಮರ್ಥವಾಗಿ ನಿಭಾಯಿಸುತ್ತಾರೆ’ ಎಂದು ಪ್ರತಿಕ್ರಿಯಿಸಿದರು.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ