ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗುಡ್ ನ್ಯೂಸ್

Spread the love

ಬೆಳಗಾವಿ: ಖಾತೆಗೆ ಹಣದ ನಿರೀಕ್ಷೆಯಲ್ಲಿರುವ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಗೃಹಲಕ್ಷ್ಮಿ ಯೋಜನೆಯ ಜುಲೈ ಕಂತಿನ ಹಣ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಜುಲೈ ಕಂತಿನ ಹಣ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದ್ದು, ಇದಾದ ಕೆಲವು ದಿನಗಳಲ್ಲಿ ಆಗಸ್ಟ್ ತಿಂಗಳ ಹಣವೂ ಬಿಡುಗಡೆಯಾಗಲಿದೆ ಇದು ನಿರಂತರ ಪ್ರಕ್ರಿಯೆಯಾಗಿದೆ ಎಂದು ಹೇಳಿದ್ದಾರೆ.

 

ರಾಜ್ಯದಲ್ಲಿ ಜಾರಿಗೊಳಿಸಲಾದ ಗ್ಯಾರಂಟಿ ಯೋಜನೆಗಳನ್ನು ಗಿಮಿಕ್ ಎಂದು ಟೀಕಿಸಿದ್ದ ಬಿಜೆಪಿಯವರೇ ಹರಿಯಾಣ, ಜಮ್ಮು ಕಾಶ್ಮೀರ. ಮಹಾರಾಷ್ಟ್ರ ಚುನಾವಣೆಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವದಾಗಿ ಹೇಳುತ್ತಿದ್ದಾರೆ. ನಮ್ಮ ಯೋಜನೆಯನ್ನು ಟೀಕಿಸಿದ್ದ ಬಿಜೆಪಿಯವರ ದ್ವಂದ್ವ ನಿಲುವು ಗೊತ್ತಾಗುತ್ತಿದೆ. ನಮ್ಮ ಗ್ಯಾರಂಟಿ ಯೋಜನೆಗಳು ರಾಜ್ಯಕ್ಕೆ ಮಾತ್ರವಲ್ಲ, ದೇಶಕ್ಕೆ ಮಾದರಿಯಾಗಿವೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ