Breaking News

ಕೊತ್ತಂಬರಿ ಸೊಪ್ಪು ಬೆಳೆದು ₹2.5 ಲಕ್ಷ ಗಳಿಸಿದ ರೈತ

Spread the love

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಕೇರೂರ ಗ್ರಾಮದ ರೈತ ಅಪ್ಪಾಸಾಬ ರೇಂದಾಳೆ ಅವರು, ಒಂದು ಎಕರೆಯಲ್ಲಿ ಕೊತ್ತಂಬರಿ ಸೊಪ್ಪು ಬೆಳೆದು ₹2.5 ಲಕ್ಷ ಆದಾಯ ಗಳಿಸಿದ್ದಾರೆ.

ಅಪ್ಪಾಸಾಬ ಅವರಿಗೆ 8 ಎಕರೆ ಜಮೀನಿದೆ. 7 ಎಕರೆಯಲ್ಲಿ ಕಬ್ಬು ಬೆಳೆದಿದ್ದು, 1 ಎಕರೆಯಲ್ಲಿ ಕೊತ್ತಂಬರಿ ಬೀಜ ಬಿತ್ತಿದ್ದರು.

ಹದ ಮಳೆ ಸುರಿದಿದ್ದರಿಂದ ಉತ್ತಮ ಇಳುವರಿ ಬಂದಿದೆ. ಕೊತ್ತಂಬರಿ ಸೊಪ್ಪಿನ ದರ ಏರಿಕೆಯಿಂದಾಗಿ ಕೈತುಂಬ ಹಣವೂ ಸಿಕ್ಕಿದೆ.

ಕೆ.ಜಿಗೆ ₹370ರ ದರದಲ್ಲಿ ಅಶೋಕ ತಳಿಯ 60 ಕೆ.ಜಿ ಕೊತ್ತಂಬರಿ ಬೀಜಗಳನ್ನು ಖರೀದಿಸಿ ಬಿತ್ತಿದ್ದರು. ಒಮ್ಮೆಯಷ್ಟೇ ರಸಗೊಬ್ಬರ ಹಾಕಿ ಎರಡು ಬಾರಿ ರಾಸಾಯನಿಕ ಸಿಂಪಡಿಸಿದ್ದರು. ಆಗಾಗ್ಗೆ ನೀರುಣಿಸಿ, ಕಳೆ ತೆಗೆದು ಬೆಳೆ ಜತನ ಮಾಡಿದ್ದರು. ಅಕ್ಟೋಬರ್‌ ಮಳೆ ಮತ್ತು ಹವಾಗುಣಕ್ಕೆ ಕೊತ್ತಂಬರಿ ಸೊಪ್ಪು ಹುಲುಸಾಗಿ ಬೆಳೆದಿದೆ.

ಹೊಲದಲ್ಲಿ ಕೊತ್ತಂಬರಿ ಸೊಪ್ಪು ನೋಡಿದ ವರ್ತಕರು ₹2.5 ಲಕ್ಷಕ್ಕೆ ಎಲ್ಲವನ್ನೂ ಗುತ್ತಿಗೆ ಪಡೆದಿದ್ದರು. ಇದರಿಂದ ಅಪ್ಪಾಸಾಬ ಅವರಿಗೆ ಕೂಲಿಯಾಳು, ಸಾಗಣೆ ಮತ್ತು ಮಾರುಕಟ್ಟೆ ವೆಚ್ಚ ಉಳಿದಿದೆ. ಒಂದು ತಿಂಗಳಿನಲ್ಲಿ ಕಟಾವಿಗೆ ಬರುವ ಈ ಬೆಳೆಗೆ ಅವರು ₹45 ಸಾವಿರ ವೆಚ್ಚ ಮಾಡಿದ್ದಾರೆ.

‘ಕೊತ್ತಂಬರಿ ಸೊಪ್ಪು ಖರೀದಿಸಿ ಎಂಟು ಕೂಲಿಯಾಳುಗಳ ನೆರವಿನಿಂದ ಕಟಾವು ಮಾಡಿ ಮುಂಬೈಗೆ ಸಾಗಿಸಿದ್ದೇನೆ. ಬೆಳಗಾವಿ, ಚಿಕ್ಕೋಡಿ ಮಾರುಕಟ್ಟೆಯಲ್ಲಿ ಒಂದು ಹಿಡಿ ಕೊತ್ತಂಬರಿ ಸೊಪ್ಪಿನ ದರ ₹20 ಇದ್ದರೆ, ಮುಂಬೈನಲ್ಲಿ ₹30ಕ್ಕೂ ಹೆಚ್ಚಿದೆ. ಉತ್ತಮ ಮಾರಾಟದಿಂದ ಹೆಚ್ಚಿನ ಲಾಭದ ನಿರೀಕ್ಷಯಿದೆ’ ಎಂದು ವ್ಯಾಪಾರಿ ರಮೇಶ ಮಲ್ಲಾಪುರ ತಿಳಿಸಿದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ