Breaking News

ಅಪೌಷ್ಟಿಕತೆ ಹೋಗಲಾಡಿಸಲು ಕ್ರಮ: ಕಾಂಬಳೆ

Spread the love

ಚಿಕ್ಕೋಡಿ: ‘ಪೋಷಣ್‌ ಅಭಿಯಾನದ ಮೂಲಕ ಗರ್ಭಿಣಿಯರು, ಬಾಣಂತಿಯರು ಮತ್ತು ಮಕ್ಕಳಿಗೆ ಪೌಷ್ಟಿಕಯುಕ್ತ ಆಹಾರ ನೀಡಿ, ಅಪೌಷ್ಟಿಕತೆ ಹೋಗಲಾಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಚಿಕ್ಕೋಡಿ ಸಿಡಿಪಿಒ ಸಂತೋಷ ಕಾಂಬಳೆ ಹೇಳಿದರು.

ತಾಲೂಕಿನ ಇಂಗಳಿ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಡಿಪಿಒ ಕಚೇರಿ ಆಯೋಜಿಸಿದ್ದ ‘ಪೋಷಣ್‌ ಅಭಿಯಾನ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

 

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್.ಎಚ್.ಸಿದ್ದಪ್ಪಾ ಮಾತನಾಡಿ, ‘ಎಲ್ಲರೂ ಸೇರಿ ಅಭಿಯಾನ ಯಶಸ್ವಿಗೊಳಿಸೋಣ’ ಎಂದರು.

ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುಧೀರ ಬೋಲೆ, ಗರ್ಭಿಣಿ, ಬಾಣಂತಿಯರ ಆರೋಗ್ಯ ಸುರಕ್ಷತಾ ಕ್ರಮಗಳ ಕುರಿತು ಮಾಹಿತಿ ಮಾಡಿದರು.

ಅಭಿಯಾನದ ಅಂಗವಾಗಿ ತಾಯಂದಿರಿಗೆ ಸಸಿಗಳನ್ನು ವಿತರಿಸಲಾಯಿತು. ಗರ್ಭಿಣಿಯರಿಗೆ ಸೀಮಂತ ಕಾರ್ಯ ಮಾಡಲಾಯಿತು.

ಇಂಗಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಮನ ಶೆಳಕೆ, ಸದಸ್ಯರಾದ ರಾಧಿಕಾ ಶಿರಹಟ್ಟಿ, ಗೀತಾ ಮಗದುಮ್ಮ, ಕಾವೇರಿ ಲಂಗೋಟೆ, ಮಂಜುಳಾ ಐಹೊಳೆ, ರಾಣಿ ಪವಾರ, ಮೇಲ್ವಿಚಾರಕಿಯರಾದ ಜಿ.ಡಿ. ಖೋತ, ಭಾರತಿ ಹೆದ್ದೂರೆ, ಉಜ್ವಲಾ ಮಲಗೌಡರ, ರಾಜು ನಾಗರಾಳೆ ಸೇರಿದಂತೆ ಅನೇಕರು ಇದ್ದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ