Breaking News

ಇಂಧನ ಪೂರೈಕೆ ಟ್ಯಾಂಕರ್‌ ಸಂಚಾರ ಸ್ಥಗಿತ‌

Spread the love

ಧಾರವಾಡ: ಹುಬ್ಬಳ್ಳಿ-ಧಾರವಾಡದಲ್ಲಿ ಪೆಟ್ರೋಲ್‌, ಡೀಸೆಲ್‌ ಪೂರೈಕೆ ಟ್ಯಾಂಕರ್‌ ಸಂಚಾರಕ್ಕೆ ವಿಧಿಸಿದ ನಿರ್ಬಂಧ ತೆರವಿಗೆ ಆಗ್ರಹಿಸಿ ಐಒಸಿಎಲ್‌ ಮತ್ತು ಎಚ್‌ಪಿಸಿಎಲ್‌ ಟ್ರಾನ್ಸ್‌ಪೋರ್ಟರ್‌ ಕಂಟ್ರಾಕ್ಟರ್ಸ್‌ ಸಂಘಟನೆ ಮತ್ತು ಉತ್ತರ ಕರ್ನಾಟಕ ಟ್ಯಾಂಕರ್‌ ಡ್ರೈವರ್ಸ್ ಅಂಡ್‌ ಹೆಲ್ಪರ್ಸ್ ಸಂಘದವರು ಶನಿವಾರ ಟ್ಯಾಂಕರ್‌ ಸಂಚಾರ ಸ್ಥಗಿತಗೊಳಿಸಿ, ಪ್ರತಿಭಟನೆ ಆರಂಭಿಸಿದರು.

 

‘ಬೆಳಿಗ್ಗೆ 8 ರಿಂದ ಮಧ್ಯಾಹ್ನ 12 ಮತ್ತು ಮಧ್ಯಾಹ್ನ 4 ರಿಂದ ರಾತ್ರಿ 9ರವರೆಗಿನ ಅವಧಿಯಲ್ಲಿ ಟ್ಯಾಂಕರ್‌ಗಳಿಗೆ ಹುಬ್ಬಳ್ಳಿ-ಧಾರವಾಡ ಪ್ರವೇಶಿಸಲು ನಿರ್ಬಂಧಿಸಿರುವುದನ್ನು ತೆರವುಗೊಳಿಸಬೇಕು. ಶನಿವಾರ ಟ್ಯಾಂಕರ್‌ಗಳಿಗೆ ಇಂಧನ ತುಂಬಿಸಿಲ್ಲ. ಡಿಪೊ, ಸ್ಟೇಷನ್‌ಗಳಲ್ಲಿ ಇಂಧನ ದಾಸ್ತಾನು ಇರುವುದರಿಂದ ಸದ್ಯಕ್ಕೆ ಸಮಸ್ಯೆಯಾಗಿಲ್ಲ. ಬೇಡಿಕೆ ಈಡೇರಿಸುವವರೆಗೆ ನಾವು ಪ್ರತಿಭಟನೆ ಮುಂದುವರೆಸುತ್ತೇವೆ’ ಎಂದು ಸಂಘಟನೆಯ ಮುಖಂಡ ಮೂರ್ತಿಮಮದಾಪುರ ತಿಳಿಸಿದರು.

‘ನಮ್ಮ ಸಾರಿಗೆ ಡಿಪೊಗಳಲ್ಲಿ ಇಂಧನ ದಾಸ್ತಾನು ಇದೆ. ಬಸ್‌ಗಳ ಸಂಚಾರಕ್ಕೆ ಇಂಧನ ಕೊರತೆ ಇಲ್ಲ. ಹಾಸನದಿಂದ ಇಂಧನ ಪೂರೈಕೆಗೆ ಮುಂಜಾಗ್ರತೆಯಾಗಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ’ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಎನ್‌ಡಬ್ಲ್ಯುಕೆಆರ್‌ಟಿಸಿ) ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ.ತಿಳಿಸಿದರು.

ಧಾರವಾಡದ ರಾಯಪುರದಲ್ಲಿ ಟ್ಯಾಂಕರ್‌ಗಳಲ್ಲಿ ಇಂಧನ ತುಂಬಿಸಿ ಹುಬ್ಬಳ್ಳಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ,. ಹೊಸಪೇಟೆ, ಬಳ್ಳಾರಿ, ರಾಯಚೂರು, ಬೆಳಗಾವಿ, ವಿಜಯಪುರ, ಕಾರವಾರ, ಬಾಗಲಕೋಟೆ, ಶಿವಮೊಗ್ಗ ಮತ್ತು ದಾವಣಗೆರೆಗೆ ನಿತ್ಯ ಕಳುಹಿಸಲಾಗುತ್ತದೆ


Spread the love

About Laxminews 24x7

Check Also

ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದ ಶಾಸಕ ಅರವಿಂದ ಬೆಲ್ಲದ.

Spread the love ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ