Breaking News

ಸೈಬರ್‌ ವಂಚನೆ: ₹8.64 ಕೋಟಿ ಕಳೆದುಕೊಂಡ ಜನ

Spread the love

ಬೆಳಗಾವಿ: ‘ನೀವು ಗಂಭೀರವಾದ ಅಪರಾಧ ಮಾಡಿದ್ದೀರಿ. ಆನ್‌ಲೈನ್‌ನಲ್ಲಿ ನಿಮಗೆ ಬಂದಿರುವ ಪಾರ್ಸೆಲ್‌ನಲ್ಲಿ ಮಾದಕ ದ್ರವ್ಯ ಕಂಡುಬಂದಿವೆ. ವಿಡಿಯೊ ಕರೆ ಮೂಲಕವೇ ನಾವು ನಡೆಸುವ ವಿಚಾರಣೆಗೆ ಹಾಜರಾಗಿ. ನಮ್ಮ ಕ್ಯಾಮೆರಾ ಕಣ್ಗಾವಲಿನಲ್ಲೇ ಇರಿ…’

ಇಂಥ ಕರೆಗಳು ನಿಮಗೂ ಬಂದರೆ ಎಚ್ಚರ.

ಇಂಟರ್‌ನೆಟ್‌ ಹಾಗೂ ಕೃತಕ ಬುದ್ಧಿಮತ್ತೆ (ಎಐ) ಬಳಸಿಕೊಂಡು ಹೀಗೆ ಕರೆ ಮಾಡುತ್ತಿರುವ ವಂಚಕರು ಹಣಕ್ಕೆ ಪೀಡಿಸುತ್ತಿದ್ದಾರೆ.

ಅವರಿಗೆ ಹೆದರಿ ಮಾಹಿತಿ ಹಂಚಿಕೊಂಡು ಸಂಕಷ್ಟಕ್ಕೆ ಸಿಲುಕಿದವರು, ನ್ಯಾಯ ಕೋರಿ ಬೆಳಗಾವಿ ನಗರ ಸಿಇಎನ್‌ ಅಪರಾಧ ಠಾಣೆ ಮೆಟ್ಟಿಲೇರುತ್ತಿದ್ದಾರೆ.

ಇಲ್ಲಿ ಸೈಬರ್‌ ಅಪರಾಧಗಳ ಸಂಖ್ಯೆ ಗಣನೀಯವಾಗಿ ಏರತೊಡಗಿದೆ. 2023ರಲ್ಲಿ ಈ ಠಾಣೆಯಲ್ಲಿ 64 ದೂರು ದಾಖಲಾಗಿದ್ದು, ಜನರು ₹3.38 ಕೋಟಿ ಕಳೆದುಕೊಂಡಿದ್ದರು.

ಈ ವರ್ಷ ಒಂಭತ್ತೇ ತಿಂಗಳಲ್ಲಿ 58 ದೂರು ದಾಖಲಾಗಿದ್ದು, ₹8.64 ಕೋಟಿ ಕಳೆದುಕೊಂಡು ಪರಿತಪಿಸುತ್ತಿದ್ದಾರೆ. ವಂಚನೆಗೆ ಒಳಗಾದವರಲ್ಲಿ ನೌಕರರು, ಮಹಿಳೆಯರು, ವಿದ್ಯಾರ್ಥಿಗಳು ಸೇರಿ ಎಲ್ಲ ಸ್ತರಗಳ ಜನರಿದ್ದಾರೆ.

ಕ್ಲಿಕ್‌ ಮಾಡುತ್ತಲೇ ಹಣ ಮಾಯ:

‘ಬ್ಯಾಂಕ್ ಖಾತೆಗಳು, ಕ್ರೆಡಿಟ್ ಕಾರ್ಡ್‌ಗಳು, ತ್ವರಿತ ಸಾಲಗಳು, ವಿವಿಧ ಬಹುಮಾನ ಪಡೆಯಲು ಮತ್ತು ತಮ್ಮ ದಾಖಲೆಗಳನ್ನು ನವೀಕರಿಸಲು ಇಲ್ಲಿ ನೀಡಲಾದ ಲಿಂಕ್‌ಗಳನ್ನು ಕ್ಲಿಕ್‌ ಮಾಡಿ’ ಎನ್ನುವ ಸಂದೇಶಗಳು ಸ್ಮಾರ್ಟ್‌ಫೋನ್‌ಗಳಿಗೆ ಬರುತ್ತಿವೆ. ಅದನ್ನು ನಂಬಿ ಜನರು ಲಿಂಕ್‌ ಮೇಲೆ ಕ್ಲಿಕ್‌ ಮಾಡುತ್ತಲೇ ಹಣ ಎಗರಿಸುತ್ತಿರುವುದು ಇತ್ತೀಚಿನ ವರ್ಷಗಳಲ್ಲಿ ಕಂಡುಬಂದಿದೆ.


Spread the love

About Laxminews 24x7

Check Also

ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್

Spread the love ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್ ಖಾನಾಪೂರ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ