Breaking News

ಸ್ಟ್ಯಾಂಡ್ ಅಪ್ ಪೆಡಲಿಂಗ್ ಚಾಂಪಿಯನ್‌ಷಿಪ್: ಪುರುಷರ ರೇಸ್‌; ಆಕಾಶ್ ಪೂಜಾರ್ ಮಿಂಚು

Spread the love

ಮಂಗಳೂರು: ನಗರದ ಆಕಾಶ್‌ ಪೂಜಾರ್ ತಮಿಳುನಾಡಿನ ರಾಮೇಶ್ವರದಲ್ಲಿ ಭಾನುವಾರ ಕೊನೆಗೊಂಡ ರಾಷ್ಟ್ರೀಯ ಸ್ಟ್ಯಾಂಡ್ ಅಪ್ ಪೆಡಲಿಂಗ್‌ ಚಾಂಪಿಯನ್‌ಷಿಪ್‌ನಲ್ಲಿ ಪದಕ ಗೆದ್ದು ಗಮನ ಸೆಳೆದರು.

ಭಾರತ ಸರ್ಫಿಂಗ್ ಫೆಡರೇಷನ್ ಸಹಯೋಗದಲ್ಲಿ ತಮಿಳುನಾಡು ಸರ್ಫಿಂಗ್ ಸಂಸ್ಥೆ ಆಯೋಜಿಸಿದ್ದ ಚಾಂಪಿಯನ್‌ಷಿಪ್‌ನ ಪುರುಷರ 12 ಕಿಲೊಮೀಟರ್ ರೇಸ್‌ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಅವರು ಈ ವಿಭಾಗದಲ್ಲಿ ಪದಕ ಗೆದ್ದ 16 ವರ್ಷದೊಳಗಿನ ಭಾರತದ ಮೊದಲ ಸರ್ಫರ್ ಎಂದೆನಿಸಿಕೊಂಡರು.

ಕರ್ನಾಟಕ ಇಲ್ಲಿ ಒಟ್ಟು 8 ಪಕದಗಳನ್ನು ಗಳಿಸಿ ಪಾರಮ್ಯ ಮೆರೆಯಿತು. ಪ್ರತಿಕೂಲ ಹವಾಮಾನವನ್ನು ಮೀರಿ ಮುನ್ನುಗ್ಗಿದ ಅವರು ಮಾಜಿ ಚಾಂಪಿಯನ್‌ಗಳಿಗೆ ಪ್ರಬಲ ಪೈಪೋಟಿ ನೀಡಿದರು.

ಇದಕ್ಕೂ ಮೊದಲು 16 ವರ್ಷದೊಳಗಿನವರ ತಾಂತ್ರಿಕ ರೇಸ್‌ನಲ್ಲಿ ಭಾರಿ ಮುನ್ನಡೆಯೊಂದಿಗೆ ಸಾಗಿದ ಆಕಾಶ್ ಪೂಜಾರ್‌ ಚಿನ್ನ ಗೆದ್ದು ಸಂಭ್ರಮಿಸಿದರು. ಅವರ ಸಹೋದರ ಪ್ರವೀಣ್ ಪೂಜಾರ್ ಎರಡು ಸೆಕೆಂಡುಗಳ ಅಂತರದಲ್ಲಿ ಬೆಳ್ಳಿ ಕಳೆದುಕೊಂಡರು. 16 ವರ್ಷದೊಳಗಿನವರ 200 ಮೀ ಸ್ಪ್ರಿಂಟ್‌ನಲ್ಲಿ ಪ್ರವೀಣ್‌ ಪೂಜಾರ್ ಬೆಳ್ಳಿ ಮತ್ತು ಆಕಾಶ್ ಪೂಜಾರ್ ಕಂಚಿನ ಪದಕ ಗಳಿಸಿದರು.

ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಬೆಳವಲಕೊಪ್ಪದ ಪ್ರವೀಣ್ ಮತ್ತು ಆಕಾಶ್ ಮಂಗಳೂರಿನಲ್ಲಿ ನೆಲೆಸಿದ್ದು ಇಲ್ಲಿನ ಸರ್ಫಿಂಗ್‌ ಸ್ವಾಮಿ ಫೌಂಡೇಷನ್‌ನಲ್ಲಿ ತರಬೇತಿ ಪಡೆಯುತ್ತಿದ್ದಾರೆ.


Spread the love

About Laxminews 24x7

Check Also

ರಸ್ತೆಗುಂಡಿ ಮುಚ್ಚಲು ನೀಡಿದ್ದ ಗಡುವು ಅಂತ್ಯ: ‘Please ask D.K.Shivakumar’ ಎಂದ ಸಿದ್ದರಾಮಯ್ಯ

Spread the loveಬೆಂಗಳೂರು: ರಾಜಧಾನಿಯಲ್ಲಿ ಹಾಳಾಗಿರುವ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳಿಗೆ ನೀಡಿದ್ದ ಗಡುವು ಇಂದಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ