ಮೈಸೂರು : ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ನಗರದ ಹೊರವಲಯದ ಉತ್ತನಹಳ್ಳಿ ಸಮೀಪದಲ್ಲಿ ನಡೆಯುವ ಯುವ ದಸರಾ ಕಾರ್ಯಕ್ರಮ ಸ್ಥಳವನ್ನು ಇಂದು ಪರಿಶೀಲಿಸಿದರು.
ಕಾರ್ಯಕ್ರಮದ ಆಯೋಜನೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ ಸಚಿವರು, ನಾಡಹಬ್ಬ ದಸರಾ ಮಹೋತ್ಸವದಲ್ಲಿ ನಡೆಯುವ ಆಕರ್ಷಕ ಕಾರ್ಯಕ್ರಮಗಳಲ್ಲಿ “ಯುವ ದಸರಾ” ಪ್ರಮುಖವಾಗಿದ್ದು, ಮೈಸೂರು ನಗರ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಿಂದ ಜನರು ಕಾರ್ಯಕ್ರಮ ವೀಕ್ಷಣೆಗೆ ಆಗಮಿಸುವರು.
ಹೀಗಾಗಿ ಅಗತ್ಯ ಸೌಲಭ್ಯವನ್ನು ಕಲ್ಪಿಸುವಂತೆ ಸೂಚಿಸಿದರು.
ಯುವ ದಸರಾಗೆ ಸಹಸ್ರಾರು ಸಂಖ್ಯೆಯಲ್ಲಿ ಯುವಜನರು ಆಗಮಿಸಿ ಸಂಭ್ರಮಿಸುತ್ತಾರೆ. ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರುವುದರಿಂದ ಯಾವುದೇ ಅನಾನುಕೂಲ ಉಂಟಾಗದಂತೆ ಅಚ್ಚುಕಟ್ಟಾಗಿ ಎಲ್ಲಾ ವ್ಯವಸ್ಥೆಯನ್ನು ರೂಪಿಸಬೇಕು ಎಂದು ಸಲಹೆ ನೀಡಿದರು.
Laxmi News 24×7