Breaking News

ಯಜಮಾನಿಯರಿಗೆ ಬಿಗ್ ಶಾಕ್ : ಈ ಮಹಿಳೆಯರಿಗೆ ಬರಲ್ಲ ಜುಲೈ ತಿಂಗಳ `ಗೃಹಲಕ್ಷ್ಮಿ’ ಹಣ!

Spread the love

ಬೆಂಗಳೂರು: ರಾಜ್ಯ ಸರ್ಕಾರದಿಂದ ಆದಾಯ ತೆರಿಗೆ ಪಾವತಿಸುತ್ತಿದ್ದರೂ, ಸರ್ಕಾರದ ಗೃಹ ಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳೂ 2000 ಪಡೆಯುತ್ತಿದ್ದಂತ 1.78 ಲಕ್ಷ ಯಜಮಾನಿಯರಿಗೆ ಹಣ ಪಾವತಿ ಮಾಡದಂತೆ ತಡೆ ಹಿಡಿಯಲಾಗಿದೆ. ಈ ಮೂಲಕ ಗೃಹ ಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಬಿಗ್ ಶಾಕ್ ನೀಡಲಾಗಿದೆ.

 

ಗೃಹ ಲಕ್ಷ್ಮೀ ಯೋಜನೆಯ ನಿಯಮಾನುಸಾರ ಆದಾಯ ತೆರಿಗೆ ಪಾವತಿ ಮಾಡುವವರಿಗೆ ಈ ಯೋಜನೆಯಡಿ ಪ್ರಯೋಜನ ಸಿಗುವುದಿಲ್ಲ. ಆದರೂ ಯೋಜನೆಗೆ ಆದಾಯ ತೆರಿಗೆ ಪಾವತಿ ಮಾಡುತ್ತಿದ್ದರೂ 1.78 ಲಕ್ಷ ಮಹಿಳೆಯರು ನೋಂದಾಯಿಸಿಕೊಂಡು, 2000 ಪಡೆಯುತ್ತಿದ್ದಂತ ಶಂಕೆ ವ್ಯಕ್ತವಾಗಿತ್ತು.

ಈ ಹಿನ್ನಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ತನಿಖೆ ಕೈಗೊಂಡು, ಪರಿಶೀಲನೆ ನಡೆಸಿದ ಕಾರಣ, ಆದಾಯ ತೆರಿಗೆ ಪಾವತಿ ಮಾಡುತ್ತಿದ್ದಂತ ಮಹಿಳೆಯರಿಗೆ ಹಣ ಪಾವತಿ ನಿಲ್ಲಿಸಲಾಗಿದೆ. ಅಲ್ಲದೇ ದಾಖಲೆ ಪರಿಶೀಲನೆಗೆ ಚಾಲನೆ ನೀಡಲಾಗಿದೆ. ಇ-ಗವರ್ನೆನ್ಸ್ ಇಲಾಖೆಗೆ ತನಿಖೆ ನಡೆಸಲು ಮಹಿಳಾ ಇಲಾಖೆ ಸೂಚಿಸಿದೆ. ಈ ಕಾರಣದಿಂದಾಗಿ ರಾಜ್ಯದಲ್ಲಿ ತೆರಿಗೆ ಪಾವತಿದಾರರಾದ ಕಾರಣ 1.78 ಲಕ್ಷ ಮಹಿಳೆಯರ ಜುಲೈ ತಿಂಗಳ ಗೃಹಲಕ್ಷ್ಮೀ ಹಣಕ್ಕೆ ತಡೆಯನ್ನು ಇಲಾಖೆ ನೀಡಿ, ಬಿಗ್ ಶಾಕ್ ನೀಡಲಾಗಿದೆ.


Spread the love

About Laxminews 24x7

Check Also

ವೀರಶೈವ ಸಮಾಜ ಆಫ್ ನಾರ್ತ್ ಅಮೆರಿಕದ 47ನೇ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಆಲಮಟ್ಟಿ ಸ್ವಾಮಿಗಳು

Spread the love ವೀರಶೈವ ಸಮಾಜ ಆಫ್ ನಾರ್ತ್ ಅಮೆರಿಕದ 47ನೇ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಆಲಮಟ್ಟಿ ಸ್ವಾಮಿಗಳು ಅಮೆರಿಕಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ