ಚಿತ್ರದುರ್ಗ, ಅಕ್ಟೋಬರ್, 2: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಕೆಆರ್ ಹಳ್ಳಿ ವೃತ್ತದ ಗ್ರಾಮ ಲೆಕ್ಕಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದಾಸೇಗೌಡ ಅವರನ್ನು ಸೋಮವಾರ (ಅಕ್ಟೋಬರ್ 1) ಜಿಲ್ಲಾಧಿಕಾರಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಇದಕ್ಕೆ ಕಾರಣ ಏನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಲಂಚ ತಗೊಂಡಿದ್ದಾರೆ ಎಂಬ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಪುಲ್ ವೈರಲ್ ಆಗಿದ್ದು, ಈ ಹಿನ್ನೆಲೆ ಗ್ರಾಮ ಲೆಕ್ಕಾಧಿಕಾರಿ ದಾಸೇಗೌಡ ಅವರನ್ನು ಜಿಲ್ಲಾಧಿಕಾರಿ ಅಮಾನತು ಮಾಡಿ ಅದೇಶ ಹೊರಡಿಸಿದದ್ದಾರೆ.
ಆದೇಶ ಕಾಪಿ: ಸೆಪ್ಟೆಂಬರ್ 30ರಂದು ತಮ್ಮ ಜಮೀನು ಕೆಲಸದ ವಿಚಾರವಾಗಿ ಹಿರಿಯೂರು ತಾಲ್ಲೂಕಿನ ವ್ಯಕ್ತಿಯೊಬ್ಬರು ಗ್ರಾಮ ಲೆಕ್ಕಾಧಿಕಾರಿ ದಾಸೇಗೌಡ ಜಿ.ಎಂ. ಬಳಿ ಹೋಗಿದ್ದು, ಈ ವೇಳೆ ಅಧಿಕಾರಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಆಗ ಆ ವ್ಯಕ್ತಿ “ಹಣ ತಗೊಳಿ ಸಾರ್ ಎಂದು ಹೇಳಿದ್ದಾರೆ. ಅಧಿಕಾರಿ ನಾನು ಆರ್.ಐ.ಗೆ ಕೊಡಬೇಕು, ಅವರಿಗೆ, ಇವರಿಗೆ ಕೊಡಬೇಕು. ನನಗೆ ಉಳಿಯುವುದು 500 ರೂಪಾಯಿ ಅಷ್ಟೇ,” ಎನ್ನುವ ಸಂಭಾಷಣೆ ವೈರಲ್ ಆಗಿದೆ.
ಲಂಚ ಪಡೆಯುತ್ತಿರುವ ಪಡೆಯುತ್ತಿರುವ ದೃಶ್ಯ ಸೆರೆಯಾಗಿರುವ ವಿಡೀಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ನೌಕರರಿಗೆ ಸದರಿ ವಿಷಯವಾಗಿ ಕಾರಣ ಕೇಳಿ ನೋಟೀಸ್ ನೀಡಲಾಗಿರುತ್ತದೆ ಎಂದು ಈ ಪ್ರಾಧಿಕಾರಕ್ಕೆ ವರದಿ ಮಾಡಿರುತ್ತಾರೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ. ಇನ್ನು ದಾಸೇಗೌಡ ಜಿ.ಎಂ. ಅವರು ಸಾರ್ವಜನಿಕರಿಂದ ಲಂಚ ಸ್ವೀಕರಿಸುತ್ತಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವುದರಿಂದ ಸದರಿಯವರ ವರ್ತನೆಯು ಕರ್ನಾಟಕ ನಾಗರೀಕ ಸೇವಾ (ನಡತೆ) ನಿಯಮಾವಳಿ 1966 ಹಾಗೂ ತಿದ್ದುಪಡಿ ನಿಯಮಗಳು 2021ರ ನಿಯಮ 3(i) (ii)(iii)ಕ್ಕೆ ವಿರುದ್ಧವಾಗಿರುವುದರಿಂದ ಈ ಕೆಳಕಂಡಂತೆ ಅದೇಶ ಹೊರಡಿಸಲಾಗಿದೆ.
Laxmi News 24×7