Breaking News

ಕಾರ್ಮಿಕ ಇಲಾಖೆಯ 101 ಲ್ಯಾಪ್ ಟಾಪ್ ಕಳ್ಳತನ ಪ್ರಕರಣ; 26 ಮಂದಿ ಅರೆಸ್ಟ್​

Spread the love

ಹುಬ್ಬಳ್ಳಿ, ಸೆ.28: ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿತರಿಸಲು ತಂದಿದ್ದ 101 ಲ್ಯಾಪ್‌ಟಾಪ್​ಗಳು (laptops) ಕಾರ್ಮಿಕ ಇಲಾಖೆ ಕಚೇರಿಯಿಂದಲೇಕಳ್ಳತನಆಗಿರುವ ಪ್ರಕರಣ ಬೆಳಕಿಗೆ ಬಂದಿತ್ತು. ಇದಕ್ಕೆ ಕಿಡಿಕಾರಿದ್ದ ಕರ್ನಾಟಕ ರಾಜ್ಯ ಕಟ್ಟಡ ಹಾಗೂ ನಿರ್ಮಾಣ ಕಾರ್ಮಿಕರ ಫೆಡರೇಶನ್, ‘ಕಾರ್ಮಿಕ ಇಲಾಖೆಯ ಅಧಿಕಾರಿಗಳ ಅಪ್ರಾಮಾಣಿಕತೆ ಮತ್ತು ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಆರೋಪಿಸಿತ್ತು. ಇದೀಗ ಘಟನೆಗೆ ಸಂಬಂಧಪಟ್ಟಂತೆ 26 ಜನ ಆರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಜೊತೆಗೆ ಕಳ್ಳತನವಾಗಿದ್ದ ಲ್ಯಾಪ್ ಟಾಪ್​ಗಳನ್ನು ಹಳೇ ಹುಬ್ಬಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್, ‘ಕಾರ್ಮಿಕರ ಮಕ್ಕಳಿಗಾಗಿ ಇದ್ದ 101 ಲ್ಯಾಪ್ ಟಾಪ್ ಕಳುವಾಗಿದ್ದವು. ಈ ಬಗ್ಗೆ ಕಾರ್ಮಿಕ ಇಲಾಖೆ ಅಸಿಸ್ಟೆಂಟ್ ಕಮಿಷ್​ನರ್ ದೂರು ನೀಡಿದ್ದರು. ಈ ಹಿನ್ನಲೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸುರೇಶ ಹುಳ್ಳೂರ ತಂಡ ರಚಿಸಲಾಗಿತ್ತು. ಸೆಪ್ಟೆಂಬರ್​ನಲ್ಲಿ ಬೆಳಗಾವಿಯಿಂದ ತಂದು ಕಾರ್ಮಿಕ ಇಲಾಖೆಯಲ್ಲಿ ಇಡಲಾಗಿದ್ದು, ಆಗಸ್ಟ್​ನಲ್ಲಿ ಪರಿಶೀಲನೆ ಮಾಡಿದಾಗ ಅವು ಕಳುವಾಗಿದ್ದು ಬೆಳಕಿಗೆ ಬಂದಿದೆ.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ