Breaking News

ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ

Spread the love

ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲ್ಲೂಕಿನ ಗ್ರಾಮವೊಂದರ ಬಾಲಕಿಯನ್ನು ಅಪಹರಿಸಿ, ಪದೇಪದೇ ಅತ್ಯಾಚಾರ ಎಸಗಿದ ಅಪರಾಧಿಗೆ ಇಲ್ಲಿನ ವಿಶೇಷ ಪೋಕ್ಸೊ ನ್ಯಾಯಾಲಯ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿ ಬುಧವಾರ ತೀರ್ಪು ನೀಡಿದೆ.

ಸವದತ್ತಿ ತಾಲ್ಲೂಕಿನ ಬಸರಗಿ ಗ್ರಾಮದ ಹನುಮಂತ ಪುಂಡಲೀಕ ಚಿ‍ಪ್ಪಲಕಟ್ಟಿ (21) ಶಿಕ್ಷೆಗೆ ಒಳಗಾದವ.

ಬಾಲಕಿಯೊಬ್ಬಳನ್ನು ಪುಸಲಾಯಿಸಿ, ಅಪಹರಣ ಮಾಡಿಕೊಂಡು ಹೋಗಿ ಮೇಲಿಂದ ಮೇಲೆ ಅತ್ಯಾಚಾರ ಎಸಗಿದ್ದ. 2019ರ ನವಂಬರ್‌ 7ರಂದು ಈ ಬಗ್ಗೆ ದೂರು ದಾಖಲಾಗಿತ್ತು. ತನಿಖಾಧಿಕಾರಿ ಎಂ.ಐ.ನಡುವಿನಮನಿ ಅವರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

20 ಸಾಕ್ಷ್ಯಗಳು ಹಾಗೂ ಮುದ್ದೆಮಾಲುಗಳನ್ನು ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶರಾದ ಸಿ.ಎಂ. ಪುಷ್ಪಲತಾ ಅವರು ಶಿಕ್ಷೆ ವಿಧಿಸಿದ್ದಾರೆ. ನೊಂದ ಬಾಲಕಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ₹1 ಲಕ್ಷ ಪರಿಹಾರ ಕೊಡುವಂತೆಯೂ ಆದೇಶಿಸಿದ್ದಾರೆ.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್.ವಿ.ಪಾಟೀಲ ವಾದ ಮಂಡಿಸಿದ್ದರು.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ