ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ತನಿಖೆ ನಡೆಯುತ್ತಿದೆ. ಸಿಎಂ ಸಿದ್ಧರಾಮಯ್ಯ ಮುಡಾ ಸಂಕಷ್ಟ ಎದುರಿಸುತ್ತಿದ್ದಾರೆ. ಸಿಎಂ ಸಿದ್ಧರಾಮಯ್ಯ ಬೆನ್ನಲ್ಲೇ ಅವರ ಪುತ್ರನಿಗೂ ಸಂಕಷ್ಟ ಎದುರಾಗಿದೆ. ಸಾಕ್ಷ್ಯ ತಿರುಚಿದ್ದಾರೆ ಎಂಬುದಾಗಿ ವ್ಯಕ್ತಿಯೊಬ್ಬರು ಯತೀಂದ್ರ ಸಿದ್ಧರಾಮಯ್ಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.
ಇಂದು ಪ್ರದೀಪ್ ಕುಮಾರ್ ಎಂಬುವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರ ಸಿದ್ಧರಾಮಯ್ಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಅವರು ನೀಡಿರುವಂತ ದೂರಿನಲ್ಲಿ ಮುಡಾದ 14 ನಿವೇಶನಗಳಿಗೆ ಸಂಬಂಧಿಸಿದಂತೆ ಸಾಕ್ಷ್ಯಗಳನ್ನು ತಿರುಚಿದ್ದಾರೆ. ಅವರ ವಿರುದ್ಧ ಸೂಕ್ತ ತನಿಖೆ ನಡೆಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಯತೀಂದ್ರ ಸಿದ್ಧರಾಮಯ್ಯ ಅವರು ನಿರ್ಣಾಯಕ ಪುರಾವೆಗಳನ್ನೇ ತಿರುಚಿ, ನಾಶ ಪಡಿಸಿದ್ದಾರೆ. ಇದು ಮುಡಾಗೆ ಸಂಬಂಧಿಸಿದಂತ ಭೂ ಹಗರಣದ ಮೇಲೇ ಪರಿಣಾಮ ಬೀರಲಿದೆ. ಈ ಸಂಬಂಧ ತನಿಖೆ ನಡೆಸಿ, ಇದರಲ್ಲಿ ಭಾಗಿಯಾಗಿರಿರುವಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.