Breaking News

ಫೆ. 10 ರಿಂದ ಬೆಂಗಳೂರಿನಲ್ಲಿ ‘ಏರೋ ಇಂಡಿಯಾ-2025’ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ

Spread the love

ಬೆಂಗಳೂರು: ಬೆಂಗಳೂರಿನ ಯಲಹಂಕ ಏರ್ ಫೋರ್ಸ್ ಸ್ಟೇಷನ್ ನಲ್ಲಿ ಎರಡು ವರ್ಷಗಳಿಗೊಮ್ಮೆ ನಡೆಯುವ ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನ ‘ಏರೋ ಇಂಡಿಯಾ- 2025’ ಫೆಬ್ರವರಿ 10 ರಿಂದ 14ರ ವರೆಗೆ 5 ದಿನಗಳ ಕಾಲ ನಡೆಯಲಿದೆ.

ರಕ್ಷಣಾ ಇಲಾಖೆ, ಭಾರತೀಯ ವಾಯು ಸೇನೆ, ಹೆಚ್.ಎ.ಎಲ್., ಡಿ.ಆರ್.ಡಿ.ಒ., ನಾಗರಿಕ ವಿಮಾನಯಾನ ಸಚಿವಾಲಯಗಳು ಜಂಟಿಯಾಗಿ ಆಯೋಜಿಸುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದಲ್ಲಿ ದೇಶ ವಿದೇಶಗಳ ವೈಮಾನಿಕ ಕ್ಷೇತ್ರದ ನೂರಾರು ಕಂಪನಿಗಳು ಭಾಗವಹಿಸಲಿವೆ.

ಫೆ. 10 ರಿಂದ ಬೆಂಗಳೂರಿನಲ್ಲಿ 'ಏರೋ ಇಂಡಿಯಾ-2025' ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ

ಯುದ್ಧವಿಮಾನ, ಹೆಲಿಕಾಪ್ಟರ್, ನಾಗರೀಕ ವಿಮಾನ, ಸಣ್ಣ ವಿಮಾನಗಳು, ಕ್ಷಿಪಣಿಗಳು, ಶಸ್ತ್ರಾಸ್ತ್ರಗಳು, ರಾಡಾರ್ ವ್ಯವಸ್ಥೆ ಸೇರಿದಂತೆ ರಕ್ಷಣಾ ವಲಯ ಮತ್ತು ನಾಗರೀಕ ವಿಮಾನಯಾನಕ್ಕೆ ಸಂಬಂಧಿಸಿದ ಉತ್ಪನ್ನಗಳು, ಬಿಡಿ ಭಾಗಗಳು, ಮಾಹಿತಿ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ ಉತ್ಪನ್ನಗಳು ಪ್ರದರ್ಶನದಲ್ಲಿರುತ್ತವೆ.


Spread the love

About Laxminews 24x7

Check Also

ಆರೋಗ್ಯ ಮತ್ತು ಫಿಟ್ನೆಸ್ ಕಡೆ ಗಮನ ಹರಿಸಿದರೆ ಜೀವನದಲ್ಲಿ ಸದಾಕಾಲ ಸಂತೋಷದಿಂದ ಇರಬಹುದು ಎಂದು ಮೈಸೂರಿನಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹೇಳಿದರು.

Spread the loveಮೈಸೂರು: ಜೀವನದಲ್ಲಿ ಸಂಪಾದನೆ ಮುಖ್ಯ. ಅದರೆ ಜೊತೆಯಲ್ಲಿ ನೆಮ್ಮದಿಯಾಗಿರಲು ಆರೋಗ್ಯವನ್ನೂ ಸಂಪಾದಿಸಬೇಕು ಎಂದು ಬಾಲಿವುಡ್ ನಟಿ ಶಿಲ್ಪ ಶೆಟ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ