Breaking News

ಖರ್ಗೆ ಭೇಟಿಗೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ: ಸತೀಶ ಜಾರಕಿಹೊಳಿ

Spread the love

ನಿಪ್ಪಾಣಿ: ‘ಮಲ್ಲಿಕಾರ್ಜುನ ಖರ್ಗೆ ನಮ್ಮ ಪಕ್ಷದ ವರಿಷ್ಠರು. ದೆಹಲಿಗೆ ಹೋದಾಗ ಅವರನ್ನು ಭೇಟಿ ಆಗಲೇಬೇಕು. ಇದು ಸಹಜ ಭೇಟಿ. ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಪರಿಶಿಷ್ಟ ಮುಖ್ಯಮಂತ್ರಿ ಕೂಗು ಎದ್ದಿಲ್ಲ.

ಖರ್ಗೆ ಅವರೊಂದಿಗೆ ಮುಡಾ ಪ್ರಕರಣದ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ರಾಜಕೀಯವಾಗಿ ನಮ್ಮ ಸಮಸ್ಯೆಗಳ ಕುರಿತಾಗಿ ಚರ್ಚಿಸಿದ್ದೇವೆ. ಸದ್ಯ ರಾಜ್ಯ ರಾಜಕಾರಣದಲ್ಲಿ ಹೊಸ ಬೆಳವಣಿಗೆ ನಡೆಯುವ ಯಾವ ಲಕ್ಷಣವೂ ಕಾಣಸಿಗುತ್ತಿಲ್ಲ’ ಎಂದರು.

ಮುಖ್ಯಮಂತ್ರಿ ಸ್ಥಾನ ತೊರೆಯುವಂತೆ ಕಾಂಗ್ರೆಸ್‌ ವರಿಷ್ಠರು ಸಿದ್ದರಾಮಯ್ಯ ಮೇಲೆ ಒತ್ತಡ ತರುತ್ತಿದ್ದಾರೆಯೇ ಎಂಬ ಪ್ರಶ್ನೆಗೆ, ‘ನಮ್ಮ ಪಕ್ಷದಿಂದ‌ ಸಿ.ಎಂ ಮೇಲೆ ಯಾವುದೇ ಒತ್ತಡವಿಲ್ಲ. ಎರಡು ತಿಂಗಳಿನಿಂದ ವಿರೋಧ ಪಕ್ಷಗಳು ಈ ವಿಚಾರವಾಗಿ ಒತ್ತಡ ತರುತ್ತಿವೆ. ಆದರೆ, ನಾವು ಕಾನೂನು ರೀತಿಯಾಗಿ ಹೋರಾಟ ಮಾಡಲು ತೀರ್ಮಾನಿಸಿದ್ದೇವೆ. ಇ.ಡಿಯವರು ಪ್ರಕರಣ ದಾಖಲಿಸಿ ತನಿಖೆ ಮಾಡಿ ಸತ್ಯಾಂಶ ಹೊರತರಲಿ. ಇದರಿಂದ ಏನೂ ತೊಂದರೆ ಇಲ್ಲ’ ಎಂದರು.

‘ಬೆಳಗಾವಿ ಸಚಿವರೊಬ್ಬರು ಭೂಕಬಳಿಕೆ ಮಾಡಿದ್ದಾರೆ’ ಎಂಬ ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್‌ ಆರೋಪಕ್ಕೆ ಪ್ರತಿಕ್ರಿಯಿಸಿದ ಸತೀಶ, ‘ಅವರು ಯಾರು ಮತ್ತು ಎಲ್ಲಿ ಭೂಕಬಳಿಕೆ ಮಾಡಿದ್ದಾರೆ ಎಂದು ಪೂರ್ಣವಾಗಿ ಹೇಳಬೇಕು. ನಂತರ ಪ್ರತಿಕ್ರಿಯೆ ನೀಡುತ್ತೇನೆ’ ಎಂದು ಉತ್ತರಿಸಿದರು.


Spread the love

About Laxminews 24x7

Check Also

ಕಾಡಾನೆ ದಾಳಿಯಿಂದ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡಿದ ಸಚಿವ ಕೆ.ಜೆ. ಜಾರ್ಜ್

Spread the loveಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲೂಕಿನ ಕೆರೆಮನೆ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟ ದಾರುಣ ಘಟನೆ ಜಿಲ್ಲೆಯಾದ್ಯಂತ ಶೋಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ