Breaking News

ದೀಪಾವಳಿ ಕಾರಣಕ್ಕೆ ನವೆಂಬರ್‌ 1ರಂದು ರಾಜ್ಯೋತ್ಸವ ಮೆರವಣಿಗೆ ಆಯೋಜನೆಗೆ ಪರ-ವಿರೋಧ

Spread the love

ಬೆಳಗಾವಿ: ನಗರದಲ್ಲಿ ಕರ್ನಾಟಕ ರಾಜ್ಯೋತ್ಸವ ಮೆರವಣಿಗೆ ಆಯೋಜನೆ ದಿನಾಂಕ ಅಂತಿಮಗೊಳಿಸುವ ವಿಚಾರವಾಗಿ, ಶನಿವಾರ ಜಿಲ್ಲಾಧಿಕಾರಿ ಭೇಟಿಯಾಗಿ ಚರ್ಚಿಸುವ ತೀರ್ಮಾನವನ್ನು ಇಲ್ಲಿ ಶುಕ್ರವಾರ ನಡೆದ ಕನ್ನಡ ಸಂಘಟನೆಗಳ ಸಭೆಯಲ್ಲಿ ಕೈಗೊಳ್ಳಲಾಯಿತು.

ಪ್ರತಿವರ್ಷ ನವೆಂಬರ್‌ 1ರಂದು ಬೆಳಗಾವಿಯಲ್ಲಿ ಅದ್ದೂರಿಯಾಗಿ ಕರ್ನಾಟಕ ರಾಜ್ಯೋತ್ಸವದ ಮೆರವಣಿಗೆ ನಡೆಯುತ್ತದೆ.

ಈ ಬಾರಿ ನ.1ರಂದೇ ದೀಪಾವಳಿ ಹಬ್ಬವೂ ಇರುವ ಕಾರಣ, ರಾಜ್ಯೋತ್ಸವದ ಮೆರವಣಿಗೆ ಮುಂದೂಡಬೇಕು ಎಂದು ಕೆಲವರು ಒತ್ತಾಯಿಸುತ್ತಿದ್ದಾರೆ. ಸಂಪ್ರದಾಯದಂತೆ ನವೆಂಬರ್‌ 1ರಂದೇ ಮೆರವಣಿಗೆ ಮಾಡಬೇಕು ಎಂಬ ಅಭಿಪ್ರಾಯವೂ ಕೇಳಿಬರುತ್ತಿದೆ. ಈ ಕುರಿತು ಚರ್ಚಿಸಲು ಸಭೆ ಕರೆಯಲಾಗಿತ್ತು.

ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ, ‘ಗಡಿ ಕನ್ನಡಿಗರ ಪಾಲಿಗೆ ರಾಜ್ಯೋತ್ಸವವೇ ದೀಪಾವಳಿ ಇದ್ದಂತೆ. ಅಂದು ಕನ್ನಡಿಗರಲ್ಲಿ ಹೆಚ್ಚಿನ ಉತ್ಸಾಹವಿರುತ್ತದೆ. ಲಕ್ಷ ಲಕ್ಷ ಸಂಖ್ಯೆಯಲ್ಲಿ ಕನ್ನಡಿಗರೂ ಸೇರುತ್ತಾರೆ. ಹಲವು ವರ್ಷಗಳಿಂದ ಅಂದೇ ಮೆರವಣಿಗೆ ಮಾಡುತ್ತ ಬಂದಿದ್ದೇವೆ. ಈ ಸಂಪ್ರದಾಯ ಮುಂದುವರಿಸಬೇಕು’ ಎಂದು ಸಲಹೆ ನೀಡಿದರು.

ರಾಜ್ಯೋತ್ಸವದ ಮೆರವಣಿಗೆ ಯಶಸ್ವಿಯಾಗಲು ಜಿಲ್ಲಾಡಳಿತ ಮತ್ತು ಪೊಲೀಸರ ಸಹಕಾರವೂ ಬೇಕು. ಅವರ ಜತೆಗೂ ಚರ್ಚಿಸೋಣ. ಮೆರವಣಿಗೆ ದಿನಾಂಕ ಮುಂದೂಡುವ ಬದಲಿಗೆ, ನ.1ರಂದು ಮೆರವಣಿಗೆ ಸಮಯ ವಿಸ್ತರಣೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸೋಣ’ ಎಂದರು.

ಮುಖಂಡ ಶ್ರೀನಿವಾಸ ತಾಳೂಕರ, ‘ಕರ್ನಾಟಕ ರಾಜ್ಯೋತ್ಸವದ ಮೆರವಣಿಗೆಯನ್ನು ಯಾವ ಕಾರಣಕ್ಕೂ ಮುಂದಕ್ಕೆ ಹಾಕಬಾರದು’ ಎಂದು ತಿಳಿಸಿದರು.


Spread the love

About Laxminews 24x7

Check Also

ಧಾರವಾಡದಲ್ಲಿ 54 ಜೂಜಾಟದ ಪ್ರಕರಣಗಳು ದಾಖಲು

Spread the love ಧಾರವಾಡ: ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಿಸುವ ಕುರಿತು ಸೂಕ್ತ ಮಾಹಿತಿ ಸಂಗ್ರಹಿಸಿ ಅಕ್ಟೋಬರ್​​ 20 ರಿಂದ 23ರವರೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ