Breaking News

ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Spread the love

ಳ್ಳಾರಿ: ಸಿದ್ದರಾಮಯ್ಯ ಹಿಂದೆ ಮಾಡಿದ್ದನ್ನು ಈಗ ಅನುಭವಿಸಬೇಕಾಗಿದೆ. ಮುಡಾ ಪ್ರಕರಣದಲ್ಲಿ ಕೇವಲ ಹದಿನಾಲ್ಕು ಸೈಟು, 62 ಕೋಟಿ ವಿಚಾರ ಅಲ್ಲ. ಅವರು ಬರೋಬ್ಬರಿ ಐದು ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ. ಅವರ ಕುಟುಂಬಸ್ಥರು, ಸಂಬಂಧಿಗಳ ಮೂಲಕ ಐದು ಸಾವಿರ ಕೋಟಿ ಆಸ್ತಿ ಬೇನಾಮಿಯಾಗಿ ಮಾಡಿದ್ದಾರೆ.

ಇದೆಲ್ಲ ತನಿಖೆ ಆಗಬೇಕು ಎಂದು ಮಾಜಿ ಸಚಿವ, ಶಾಸಕ ಜನಾರ್ದನ ರೆಡ್ಡಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಿನಾಮೆ ಕೇಳಿ ಕೇಳಿ ಸಾಕಾಗಿದೆ. ಹಿಂದೆ ಅಡ್ವಾನಿ ಅವರು ಯಡಿಯೂರಪ್ಪ ಹಾಗೂ ನಮ್ಮೆಲರಿಗೂ ರಾಜಿನಾಮೆ ಕೊಡಲು ಒಂದೇ ಮಾತು ಹೇಳಿದಾಗ ನಾವೆಲ್ಲಾ ರಾಜಿನಾಮೆ ಕೊಟ್ಟು ಸರ್ಕಾರವನ್ನೇ ವಿಸರ್ಜನೆ ಮಾಡಿದ್ದೆವು ಎಂದರು.

ಈಗ ಕಾಂಗ್ರೆಸ್‌ ಭ್ರಷ್ಟಾಚಾರದಲ್ಲಿ ಮುಳುಗಿದೆ. ಬಳ್ಳಾರಿಯಲ್ಲಿ ಹಲವು ಸ್ಟೀಲ್ ಕಂಪನಿಗಳು ಬರಬೇಕಿತ್ತು. ಆದರೆ ಸಿದ್ದರಾಮಯ್ಯ ಅದಕ್ಕೆ ಕಲ್ಲು ಹಾಕಿ, ಜನರ ಉದ್ಯೋಗ ಕಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟಿ ಕೋಟಿ ಹಣ ಲೂಟಿಯಾಗಿದೆ. ಸಿದ್ದರಾಮಯ್ಯ ಸದನದಲ್ಲಿ 180 ಕೋಟಿ ಅಲ್ಲ 82 ಕೋಟಿ ಎಂದು ಒಪ್ಪಿಕೊಂಡಿದ್ದಾರೆ. ಇಲ್ಲಿ ಕೇವಲ ನಾಗೇಂದ್ರ ಮಾತ್ರ ಅಲ್ಲ, ಇಡೀ ಸರ್ಕಾರ ಭಾಗಿಯಾಗಿದೆ ಎಂದು ರೆಡ್ಡಿ ಆರೋಪಿಸಿದರು.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ