Breaking News

ರಾಜಧಾನಿಯಲ್ಲಿ ಸತತ 2 ದಿನವೂ ಗುಡುಗು ಸಹಿತ ಮಳೆ ಆರ್ಭಟ

Spread the love

ರಾಜಧಾನಿಯಲ್ಲಿ ಸತತ 2 ದಿನವೂ ಗುಡುಗು ಸಹಿತ ಮಳೆ ಆರ್ಭಟ

ಬೆಂಗಳೂರು:ರಾಜಧಾನಿಯಲ್ಲಿ ಸತತ 2 ದಿನವೂ ಗುಡುಗು ಮಿಂಚು ಸಹಿತ ಮಳೆ ಮುಂದುವರಿದ್ದು, ಶುಕ್ರವಾರ ರಾತ್ರಿ ಹಾಗೂ ಶನಿವಾರ ಸುರಿದ ವರ್ಷಧಾರೆಯಿಂದ ನಗರದ ವಿವಿಧ ಕಡೆಗಳಲ್ಲಿ ಅವಾಂತರ ಸೃಷ್ಟಿಯಾಯಿತು. ತಡರಾತ್ರಿವರೆಗೂ ಮಳೆ ಸುರಿಯುತ್ತಿತ್ತು.

ಸರ್ಜಾಪುರ ರಸ್ತೆಯಲ್ಲಿ ನೀರು ತುಂಬಿಕೊಂಡಿದ್ದ ಪರಿಣಾಮ ಸವಾರರು ಪರದಾಡಿದರು.

ಪ್ರತಿ ಬಾರಿ ಮಳೆ ಬಂದಾಗ ಇದೇ ಸಮಸ್ಯೆ ಪುನರಾವರ್ತನೆಯಾಗುತ್ತಿದ್ದರೂ ಬಿಬಿಎಂಪಿ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದರು. ಜಯನಗರದಲ್ಲಿ ಮರ ಬಿದ್ದು ಎರಡು ಕಾರುಗಳು ಜಖಂಗೊಂಡಿದ್ದವು.ಅದೃಷ್ಟವಶಾತ್​ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೆಣ್ಣೂರು ಮುಖ್ಯರಸ್ತೆಯ ವಡ್ಡರಪಾಳ್ಯದಲ್ಲಿ ಭಾರಿ ಪ್ರಮಾಣದಲ್ಲಿ ನೀರು ನಿಂತಿತ್ತು. ಇದರಿಂದಾಗಿ ವಾಹನ ಚಲಾಯಿಸಲು ಸವಾರರು ಹೈರಣಾದರು.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ