Breaking News

ಅಂಬಿಗ ಸಮುದಾಯದಲ್ಲಿ ಬರುವ ತಳವಾರ ಪರಿಹಾರಕ್ಕೆ ಎಸ್ ಟಿ ಜಾತಿ ಪ್ರಮಾಣ ಪತ್ರ ನೀಡಬಾರದು

Spread the love

ಬೆಳಗಾವಿ: ಅಂಬಿಗ ಸಮುದಾಯದಲ್ಲಿ ಬರುವ ತಳವಾರ ಪರಿಹಾರಕ್ಕೆ ಎಸ್ ಟಿ ಜಾತಿ ಪ್ರಮಾಣ ಪತ್ರ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕ ವಾಲ್ಮೀಕಿ ಯುವ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ವಿಜಯ ತಳವಾರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ

 

ಇತ್ತೀಚಿಗೆ ಎಸ್.ಟಿ.ಪಂಗಡಕ್ಕೆ ವಾಲ್ಮೀಕಿ, ನಾಯಕ ಸಮುದಾಯದ ಪರ್ಯಾಯ ಪದಗಳಾದ ತಳವಾರ, ಪರಿವಾರರಿಗೆ ಮಾತ್ರ ಎಸ್.ಟಿ ಪ್ರಮಾಣ ಪತ್ರ ನೀಡುವಂತೆ ಸರ್ಕಾರ ಆದೇಶಿಸಿದ್ದು, ಇದನ್ನು ಅನ್ಯ ಸಮುದಾಯದವರಾದ ಅಂಬಿಗರು, ಬೇಸ್ತರು, ಕೋಳಿ, ಸುಣಗಾರ ಇತ್ಯಾದಿ ಸಮುದಾಯದವರು ದುರುಪಯೋಗ ಮಾಡಿಕೊಂಡು ಖೊಟ್ಟಿ ಎಸ್.ಟಿ ಜಾತಿ ಪತ್ರ ಪಡೆಯುತ್ತಿದ್ದಾರೆ. ಇದರಿಂದ ಮೂಲ ವಾಲ್ಮೀಕಿ ಜನಾಂಗಕ್ಕೆ ಅನ್ಯಾಯವಾಗುತ್ತಿದ್ದು, ಆದ ಕಾರಣ ಪರಿಶಿಷ್ಟ ಪಂಗಡದ ಪಟ್ಟಿಯ ಕ್ರಮ ಸಂಖ್ಯೆ 38ರ ಅಡಿಯಲ್ಲಿ ನಾಯಕ ಜಾತಿಯ ಪರ್ಯಾಯ ಪದವಾದ ಪರಿವಾರ ತಳವಾರ ಹೊರತು ಪಡಿಸಿ, ಅಂಬಿಗೆ, ತಳವಾರ, ಬೇಸ್ತ್ ಗಂಗಾಮತ ಈ ಜನಾಂಗಕ್ಕೆ ಎಸ್ ಟಿ ಜಾತಿ ಪ್ರಮಾಣ ಪತ್ರ ನೀಡಬಾರದು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ

ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.


Spread the love

About Laxminews 24x7

Check Also

ಮಹಾಜನ ವರದಿಯೇ ಅಂತಿಮ ಎಂದು ನಿರ್ಣಯ ಕೈಗೊಳ್ಳಲು ಕನ್ನಡಪರ ಸಂಘಟನೆಗಳ ಒತ್ತಾಯ

Spread the loveಬೆಳಗಾವಿ: ಬೆಳಗಾವಿ ಕರ್ನಾಟಕ ಅವಿಭಾಜ್ಯ ಅಂಗ. ಮಹಾಜನ ವರದಿಯೇ ಅಂತಿಮ ಎಂದು ಐತಿಹಾಸಿಕ ನಿರ್ಣಯ ಕೈಗೊಳ್ಳಲು ಬೆಳಗಾವಿ ಮಹಾನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ