ಮುಧೋಳ : ಜಾನಪದ ಕಲಾವಿದ ಗುರುರಾಜ ಹೊಸಕೋಟಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ.
ಅಪಘಾತದಲ್ಲಿ ಹೊಸಕೋಟಿಯವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. ಭಾನುವಾರ(ಅ.6) ರಾತ್ರಿ ಮುಧೋಳ ಮಾರ್ಗದಿಂದ ಮಹಾಲಿಂಗಪುರದ ಕಡೆಗೆ ತೆರಳುವಾಗ ಎದುರಿನಿಂದ ಬರುತ್ತಿದ್ದ ವಾಹನ ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಬದಿಯಲ್ಲಿನ ಬಂಡೆಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಅಪಘಾತದಲ್ಲಿ ಗಾಯಗೊಂಡಿರುವ ಹೊಸಕೋಟಿ ಅವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
Laxmi News 24×7