ಬೆಳಗಾವಿ: ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಗ್ರಾಮವೊಂದರದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ ಇಲ್ಲಿನ ವಿಶೇಷ ಶೀಘ್ರಗತಿ ಪೋಕ್ಸೊ ನ್ಯಾಯಾಲಯವು 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿದೆ.
ತಿಗಡೊಳ್ಳಿ ಗ್ರಾಮದ ಗಂಗಪ್ಪ ಕಲ್ಲಪ್ಪ ಕೋಲಕಾರ ಶಿಕ್ಷೆಗೆ ಒಳಗಾದವ.
ಬಾಲಕಿಯನ್ನು ಪುಸಲಾಯಿಸಿ, ಪ್ರೀತಿಸುತ್ತೆನೆ- ಮದುವೆಯಾಗುತ್ತೇನೆ ಎಂದು ನಂಬಿಸಿದ್ದ. 2017ರ ಸೆಪ್ಟೆಂಬರ್‌ನಲ್ಲಿ ಬೈಕ್ ಮೇಲೆ ಅಪಹರಿಸಿಕೊಂಡು ಮಹಾರಾಷ್ಟ್ರದ ತಾಸಗಾಂವ ಎಂಬಲ್ಲಿ ಬಿಲ್ಡಿಂಗ್‌ವೊಂದರಲ್ಲಿ ಇರಿಸಿದ್ದ. ಅಲ್ಲಿಯೇ ಪದೇಪದೇ ಅತ್ಯಾಚಾರ ಎಸಗಿದ್ದ.
ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ತನಿಖಾಧಿಕಾರಿ ರಾಘವೇಂದ್ರ ಬ. ಹವಾಲದಾರ ಅವರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ವಿಶೇಷ ಶೀಘ್ರಗತಿ ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶರಾದ ಸಿ.ಎಂ. ಪುಷ್ಪಲತಾ ಅವರು ತೀರ್ಪು ನೀಡಿದ್ದಾರೆ.
ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರದಿಂದ ₹1 ಲಕ್ಷ ಪರಿಹಾರ ನೀಡುವಂತೆಯೂ ಆದೇಶಿಸಿದ್ದಾರೆ.
Laxmi News 24×7