Breaking News

ಡಿ.ಕೆ. ಶಿವಕುಮಾರ್ ಸಿಎಂ ಆದರೆ ಅಭ್ಯಂತರವಿಲ್ಲ : ಸತೀಶ್ ಜಾರಕಿಹೊಳಿ

Spread the love

ಮೈಸೂರು, ಅ.8- ಮುಂದಿನ ಐದು ವರ್ಷ ತಾವು ಸಚಿವರಾಗಿರಲಿದ್ದು, ಒಳ್ಳೆಯ ಕೆಲಸ ಮಾಡುವತ್ತ ಗಮನ ನೀಡುತ್ತೇವೆ. ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ . ಹಾಗಾಗಿ ಹುದ್ದೆಗಾಗಿ ರೇಸ್ ಎಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

 

ದಸರಾ ಮಹೋತ್ಸವ ವೀಕ್ಷಣೆಗೆ ಮೈಸೂರಿಗೆ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಸದ್ಯಕ್ಕೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾರೆ. ಅವರೇ ಮುಂದುವರೆಯುತ್ತಾರೆ. ಹುದ್ದೆ ಖಾಲಿಯಿಲ್ಲ ಎಂದು ಸ್ಪಷ್ಟಪಡಿಸಿದರು.

ಸತೀಶ್ ಜಾರಕಿಹೊಳಿ ಮುಂದಿನ ಮುಖ್ಯಮಂತ್ರಿಯಾಗಬೇಕೆಂದು ವಿರೋಧ ಪಕ್ಷಗಳು ಅಭಿಮಾನ ತೋರಿಸುತ್ತಿರುವುದಕ್ಕೆ ಧನ್ಯವಾದಗಳು ಎಂದು ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿಗಳು. ನಾವೆಲ್ಲ ಅವರ ಬೆಂಬಲಕ್ಕೆ ಇದ್ದೇವೆ. ಐದು ವರ್ಷ ಕಾಲವು ಸಿದ್ದರಾಮಯ್ಯ ಅವರೇ ಅಧಿಕಾರದಲ್ಲಿ ಮುಂದುವರೆಯುತ್ತಾರೋ ಅಥವಾ ಮೂರು ವರ್ಷ ಮಾತ್ರ ಇರುತ್ತಾರೋ ಎಂಬುದನ್ನು ಹೈಕಮಾಂಡ್ ಹೇಳಬೇಕು. ಅದರ ಬಗ್ಗೆ ಹೇಳಿಕೆ ನೀಡುವ ಸಾಮಥ್ರ್ಯ ತಮಗಿಲ್ಲ ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾದರೂ ತಮಗೇನೂ ಆಭ್ಯಂತರವಿಲ್ಲ. ಈ ನಿಟ್ಟಿನಲ್ಲಿ ಹೈಕಮಾಂಡ್ ತಮ್ಮೊಂದಿಗೆ ಯಾವುದೇ ಚರ್ಚೆ ನಡೆಸಿಲ್ಲ. ಮುಂದಿನ ಯಾವುದೇ ನಿರ್ಧಾರಗಳಾದರೂ ಪಕ್ಷದ ವರಿಷ್ಠರೇ ತೆಗೆದುಕೊಳ್ಳಬೇಕು ಎಂದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ