ಕಿತ್ತೂರು: ‘ಕಿತ್ತೂರು ಕೋಟೆಯನ್ನು ಪ್ರವಾಸಿ ತಾಣವಾಗಿ ಮಾರ್ಪಾಡು ಮಾಡಲು ಯೋಜನೆ ರೂಪಿಸಲಾಗಿದೆ. ₹30 ಕೋಟಿ ಅನುದಾನದಲ್ಲಿ ಹೊಸ ತಂತ್ರಜ್ಞಾನ ಬಳಕೆಯ ಮೂಲಕ ವಿದ್ಯುನ್ಮಾನ ಮಾದರಿಯ ಉದ್ಯಾನ (ಥೀಮ್ ಪಾರ್ಕ್) ನಿರ್ಮಾಣ ಮಾಡಲಾಗುವುದು’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಆಶ್ರಯದಲ್ಲಿ ಕಿತ್ತೂರು ಕೋಟೆ ಆವರಣದಲ್ಲಿ ಮಂಗಳವಾರ, ಚನ್ನಮ್ಮನ ಕಿತ್ತೂರಿನ ಕೋಟೆ, ಅರಮನೆ ಸಂರಕ್ಷಣಾ ಕಾಮಗಾರಿಗಳ ಭೂಮಿಪೂಜೆ ಹಾಗೂ ಶಂಕುಸ್ಥಾಪನೆ ಸಮಾರಂಭದಲ್ಲಿ ಅವರು ಮಾತನಾಡಿದರು.
‘ಕೋಟೆಯ ಮಹಾದ್ವಾರ, ಗೋಡೆಗಳು ಸೇರಿಂತೆ ವಿವಿಧ ಅವಶೇಷಗಳನ್ನು ಸಂರಕ್ಷಿಸಲು ₹12.11 ಕೋಟಿ, ಇತರ ಕಾಮಗಾರಿಗಳಿಗೆ ₹2.4 ಕೋಟಿ ಅನುದಾನ ಬಳಕೆಯಾಗಲಿದೆ. ಕಳೆದ ಒಂದು ವರ್ಷದಿಂದ ಈ ಭಾಗದ ಶಾಸಕರ ಬೇಡಿಕೆಯಿತ್ತು. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಟೆ ಅಭಿವೃದ್ಧಿಗೆ ಕೂಡಲೇ ಅನುದಾನ ಮಂಜೂರು ಮಾಡಿದರು’ ಎಂದರು.
Laxmi News 24×7