Breaking News

ಕಾಂತಾರ’ ಕಂಪು: ರಾಷ್ಟ್ರಪತಿಯಿಂದ ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

Spread the love

ವದೆಹಲಿ:ಕನ್ನಡ ಚಿತ್ರರಂಗದ ಹೆಮ್ಮೆಯ ಸಿನಿಮಾ, ಬ್ಲಾಕ್​ಬಸ್ಟರ್​ ‘ಕಾಂತಾರ’ ಚಿತ್ರದಲ್ಲಿನ ಅಮೋಘ ಅಭಿನಯಕ್ಕೆ ಅತ್ಯುತ್ತಮ ನಟ ಪ್ರಶಸ್ತಿ (Best Actor Award) ಪಡೆದ ನಟ ರಿಷಬ್ ಶೆಟ್ಟಿ (Rishab Shetty), ದೆಹಲಿಯಲ್ಲಿ ನಡೆದ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರಿಂದ ಈ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.

ಈ ದೃಶ್ಯಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಕನ್ನಡಿಗರಲ್ಲಿ ಭಾರೀ ಸಂತಸವನ್ನು ಉಂಟುಮಾಡಿದೆ.

 

 

70ನೇ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿಯಾದ ನಟ ರಿಷಬ್ ಶೆಟ್ಟಿ, ಕಾಂತಾರ ಚಿತ್ರಕ್ಕಾಗಿ ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ಸ್ವೀಕರಿಸಿದ್ದಾರೆ. ದ್ರೌಪದಿ ಮುರ್ಮು ಅವರಿಂದ ಈ ಪ್ರಶಸ್ತಿ ಪಡೆದಿದ್ದು, ಕನ್ನಡಿಗರಿಗೆ ಹೆಮ್ಮೆಯ ಕ್ಷಣವಾಗಿದೆ. 2022ರಿಂದಲೂ ಕಾಂತಾರ ಕಂಪು ಜಾಗತಿಕವಾಗಿ ಪಸರಿಸಿದ್ದು, ಇತರೆ ಚಿತ್ರರಂಗದ ಗಣ್ಯುರು ಇದೀಗ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುತ್ತಿದ್ದಾರೆ. ಸ್ಯಾಂಡಲ್​ವುಡ್​ನೊಂದಿಗೆ ನಾವು ಕೈಜೋಡಿಸಬೇಕು, ಅವರೊಟ್ಟಿಗೆ ಸಿನಿಮಾ ಮಾಡಬೇಕು ಎಂಬ ಆಶಯ ವ್ಯಕ್ತಪಡಿಸಿರುವುದು ಕನ್ನಡ ಸಿನಿರಂಗದ ಹಿರಿಮೆಯನ್ನು ಹೆಚ್ಚಿಸಿದೆ.


Spread the love

About Laxminews 24x7

Check Also

ಕಾಡಾನೆ ದಾಳಿಯಿಂದ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡಿದ ಸಚಿವ ಕೆ.ಜೆ. ಜಾರ್ಜ್

Spread the loveಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲೂಕಿನ ಕೆರೆಮನೆ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟ ದಾರುಣ ಘಟನೆ ಜಿಲ್ಲೆಯಾದ್ಯಂತ ಶೋಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ