Breaking News

ನಂಗಲಿ ಆರ್‌ಟಿಒ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Spread the love

ಮುಳಬಾಗಿಲು: ತಾಲ್ಲೂಕಿನ ನಂಗಲಿ ಆರ್‌ಟಿಒ ಕಚೇರಿ ಮೇಲೆ ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದರು.

ಬೆಂಗಳೂರು ಲೋಕಾಯುಕ್ತ ಡಿವೈಎಸ್‌ಪಿ ಪ್ರದೀಪ್ ನೇತೃತ್ವದಲ್ಲಿ 13 ಅಧಿಕಾರಿಗಳ ತಂಡವು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿತು.

ಒಟ್ಟು ₹10 ಸಾವಿರ ವಸೂಲಿಯಾಗಿದ್ದರೆ, ಲೆಕ್ಕವಿಲ್ಲದ ₹24,500 ಅನ್ನು ಅಧಿಕಾರಿಗಳು ವಶಕ್ಕೆ ಪಡೆದರು.

ನಂಗಲಿ ಆರ್‌ಟಿಒ ಕಚೇರಿಯಲ್ಲಿ ಸಾರ್ವಜನಿಕರು ಮತ್ತು ವಾಹನ ಸವಾರರಿಂದ ಅಧಿಕಾರಿಗಳು ಲಂಚ ಪಡೆಯುತ್ತಿದ್ದಾರೆ ಎಂಬ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಲೋಕಾಯುಕ್ತ ಅಧಿಕಾರಿಗಳು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಯಾವುದೇ ಮುನ್ಸೂಚನೆ ನೀಡದೆ, ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಸಂಸ್ಕೃತ ಶಾಲಾ ಶಿಕ್ಷಕನಿಂದ 9 ವರ್ಷದ ವಿದ್ಯಾರ್ಥಿ ಮೇಲೆ ಅಮಾನುಷ ಹಲ್ಲೆ ಆರೋಪ: ವಿಡಿಯೋ ವೈರಲ್, ಶಿಕ್ಷಕ ಪರಾರಿ, ಪೊಲೀಸರಿಂದ ತಲಾಶ್​

Spread the loveಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಸಂಸ್ಕೃತ ವೇದ ವಸತಿ ಶಾಲೆಯೊಂದರಲ್ಲಿ ವಿದ್ಯಾರ್ಥಿಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸುತ್ತಿರುವ ಆಘಾತಕಾರಿ ಪ್ರಕರಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ