Breaking News

ಅಗತ್ಯ ದಾಖಲೆ ನೀಡುವಂತೆ ಮುಡಾಕ್ಕೆ ಜಾರಿ ನಿರ್ದೇಶನಾಲಯ ಸೂಚನೆ?

Spread the love

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ದೂರಿಗೆ ಸಂಬಂಧಿಸಿ ಅಗತ್ಯ ದಾಖಲೆಗಳನ್ನು ನೀಡುವಂತೆ ಜಾರಿ ನಿರ್ದೇಶನಾಲಯವು ಇಲ್ಲಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸೂಚಿಸಿದೆ ಎನ್ನಲಾಗಿದೆ.

‘ಇ.ಡಿ. ಬೆಂಗಳೂರು ಕಚೇರಿಯಿಂದ ಮುಡಾ ಕಚೇರಿಗೆ ಪತ್ರ ರವಾನೆಯಾಗಿದ್ದು, ಲೋಕಾಯುಕ್ತದಲ್ಲಿ ಸಿದ್ದರಾಮಯ್ಯ ಸೇರಿದಂತೆ ನಾಲ್ವರು ಆರೋಪಿಗಳ ವಿರುದ್ಧ ದಾಖಲಾದ ಎಫ್‌ಐರ್‌ಗೆ ಸಂಬಂಧಿಸಿ ಎಲ್ಲ ದಾಖಲೆಗಳ ದೃಢೀಕೃತ ಪ್ರತಿಗಳನ್ನು ಒದಗಿಸುವಂತೆ ಕೇಳಿದೆ’ ಎಂದು ಮೂಲಗಳು ತಿಳಿಸಿವೆ.

ಆದರೆ ಮುಡಾ ಅಧಿಕಾರಿಗಳು ಇದನ್ನು ಖಚಿತಪಡಿಸಿಲ್ಲ.

ಮುಡಾ ವ್ಯಾಪ್ತಿಯಲ್ಲಿ ‘ಸೆಟ್ಲ್‌ಮೆಂಟ್ ಡೀಡ್‌’ ಹೆಸರಿನಲ್ಲಿ ನಡೆದಿರುವ ನಿವೇಶನಗಳ ಹಂಚಿಕೆ ಮತ್ತು ನೋಂದಣಿ ಬಗ್ಗೆಯೂ ಜಾರಿ ನಿರ್ದೇಶನಾಲಯಕ್ಕೆ ದೂರು ಸಲ್ಲಿಕೆಯಾಗಿದ್ದು, ಈ ಪ್ರಕರಣವನ್ನೂ ಇ.ಡಿ. ಅಧಿಕಾರಿಗಳು ಪ್ರತ್ಯೇಕವಾಗಿ ಪರಿಶೀಲಿಸುವ ಸಾಧ್ಯತೆ ಇದೆ.


Spread the love

About Laxminews 24x7

Check Also

ಪ್ರಧಾನಿ ನರೇಂದ್ರ ಮೋದಿಯವರು ಇಂದು ಸಹ ಮೈಸೂರು, ರಾಮನಗರ, ಚಿನ್ನದ‌ ನಾಡು ಕೋಲಾರಕ್ಕೆ ಭೇಟಿ ನೀಡಿ ಚುನಾವಣೆಯ ರಣಕಹಳೆಯನ್ನು ಮೊಳಗಲಿಸಲು ಮುಂದಾಗಿದ್ದಾರೆ.

Spread the love ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕೋಲಾರ, ಚನ್ನಪಟ್ಟಣ ಬೃಹತ್​​ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ