Breaking News

ಸಿದ್ದರಾಮಯ್ಯ ನಂತರ ರಾಜ್ಯದಲ್ಲಿ ಅಂತಹ ನಾಯಕರಿದ್ದರೆ ಅದು ಸತೀಶ್ ಜಾರಕಿಹೊಳಿ ಮಾತ್ರ: ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿಕೆ

Spread the love

ಚಿಕ್ಕಮಗಳೂರು: ಸಿಎಂ ಸಿದ್ದರಾಮಯ್ಯ ನಂತರ ರಾಜ್ಯ ಕಾಂಗ್ರೆಸ್ ನಲ್ಲಿ ಅಂತಹ ಮತ್ತೊಬ್ಬ ನಾಯಕನಿದ್ದರೆ ಅದು ಸಚಿವ ಸತೀಶ್ ಜಾರಕಿಹೊಳಿ ಮಾತ್ರ ಎಂದು ಕಾಂಗ್ರೆಸ್ ಶಾಸಕ ಹೆಚ್.ಡಿ.ತಮ್ಮಯ್ಯ ತಿಳಿಸಿದ್ದಾರೆ.

ಚಿಕ್ಕಮಗಳೂರಿನ ತರಿಕೆರೆ ತಾಲೂಕಿನಲ್ಲಿ ನಡೆದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ವೇಳೆ ಮಾತನಾಡಿದ ಹೆಚ್.ಡಿ.ತಮ್ಮಯ್ಯ, ಸಚಿವ ಸತೀಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿದ್ದಾರೆ.

 

ರಾಜ್ಯದಲ್ಲಿ ಸಿದ್ದರಾಮಯ್ಯ ಹೊರತುಪಡಿಸಿದರೆ ಸತೀಶ್ ಜಾರಕಿಹೊಳಿಯವರೇ ಭವಿಷ್ಯದ ನಾಯಕರು. ಸತೀಶ್ ಜಾರಕಿಹೊಳಿಯವರ ರೀತಿ ಸರಳ-ಸಜ್ಜನ ಮನುಷ್ಯ ಮತ್ತೊಬ್ಬರಿಲ್ಲ. ಸಿದ್ದರಾಮಯ್ಯ ನಂತರ ರಾಜ್ಯ ಕಾಂಗ್ರೆಸ್ ನಲ್ಲಿ ಅಂತಹ ನಾಯಕನಿದ್ದರೆ ಅದು ಸತೀಶ್ ಜಾರಕಿಹೊಳಿ ಮಾತ್ರ ಎಂದು ಹೇಳಿದ್ದಾರೆ.

ಒಂದೆಡೆ ಸಿಎಂ ಹುದ್ದೆಗಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಕನಸುಕಾಣುತ್ತಿದ್ದರೆ, ಮತ್ತೊಂದೆಡೆ ಸಚಿವ ಸತೀಶ್ ಜಾರಕಿಹೊಳಿ ಮುಂದಿನ ಸಿಎಂ ಎಂಬ ಕೂಗು ಜೋರಾಗಿದೆ. ಇನ್ನೊಂದೆಡೆ ಖರ್ಗೆ ಹಾಗೂ ಜಿ.ಪರಮೇಶ್ವರ್ ಕೂಡ ಸಿಎಂ ಕುರ್ಚಿಗಾಗಿ ತೆರೆಮರೆಯಲ್ಲಿ ಕಸರತ್ತು ನಡೆಸಿದ್ದಾರೆ ಎನ್ನಲಾಗುತ್ತಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ