Breaking News

ಸಿಎಂ ಸ್ಥಾನದಿಂದ ಕೆಳಗಿಳಿಯುವುದು ಊಹಾಪೋಹ ಅಲ್ಲ: ಬಿ.ವೈ.ವಿಜಯೇಂದ್ರ

Spread the love

ದಗ: ‘ಸಿದ್ದರಾಮಯ್ಯ ಅವರು ಸಿಎಂ ಸ್ಥಾನದಿಂದ ಕೆಳಗಿಳಿಯುತ್ತಾರೆ ಎಂಬುದು ಊಹಾಪೋಹ ಅಲ್ಲ. ನೂರಕ್ಕೆ ನೂರು ಸತ್ಯ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

‘ಅವರು ಕೆಳಗಿಳಿಯುತ್ತಿರುವುದು ಗೊತ್ತಾಗಿರುವ ಕಾರಣದಿಂದಲೇ ಕೆಲವು ನಾಯಕರು ತಮ್ಮ ಬಳಿ ಎಷ್ಟು ಜನ ಇದ್ದಾರೆ ಎಂಬುದನ್ನು ತೋರಿಸಲು ಸಭೆ ನಡೆಸುತ್ತಿದ್ದಾರೆ’ ಎಂದು ಬುಧವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.

 

ಸಿಎಂ ರಾಜೀನಾಮೆ ಕೊಡುವ ಸಂದರ್ಭದಲ್ಲಿ ಜಾತಿಗಣತಿ ದಾಳ ಉರುಳಿಸಿದ್ದಾರೆ. ಆದರೆ, ಸಿಎಂ ಸ್ಥಾನ ಉಳಿಸಲು ಸಾಧ್ಯವಿಲ್ಲ. ರಾಜ್ಯದ ಜನರು ದಡ್ಡರಲ್ಲ, ಈ ಎಲ್ಲ ಬೆಳವಣಿಗೆಗಳನ್ನೂ ಗಮನಿಸುತ್ತಿದ್ದಾರೆ’ ಎಂದು ಹೇಳಿದರು.

‘ಭಂಡತನ ಮುಂದುವರಿಸಲು ಬಹಳ ದಿನ ಸಾಧ್ಯವಿಲ್ಲ. ಕಾಂಗ್ರೆಸ್‌ ಹೈಕಮಾಂಡ್‌ ನಿರ್ಧಾರ ಮಾಡಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸಂದರ್ಭಕ್ಕೆ ಬಂದು ನಿಂತಿದ್ದಾರೆ. ಸಿಎಂ ರಾಜೀನಾಮೆ ನೀಡುವುದು ಸತ್ಯ. ಅತಿ ಶೀಘ್ರದಲ್ಲೇ ಮಾಹಿತಿ ಸಿಗಲಿದೆ. ಬಿಜೆಪಿ- ಜೆಡಿಎಸ್‌ ಪಾದಯಾತ್ರೆ ಪರಿಣಾಮ ಸಿಎಂ ರಾಜೀನಾಮೆ ಕೊಡುತ್ತಾರೆ. ವಿರೋಧ ಪಕ್ಷದಲ್ಲಿ ಯಶಸ್ವಿಯಾಗಿ ಕೆಲಸ ಮಾಡುತ್ತಿದ್ದೇವೆ. ಅದಕ್ಕೆ ಸಂತೋಷ ಇದೆ’ ಎಂದು ಹೇಳಿದರು.


Spread the love

About Laxminews 24x7

Check Also

ಕಾಡಾನೆ ದಾಳಿಯಿಂದ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡಿದ ಸಚಿವ ಕೆ.ಜೆ. ಜಾರ್ಜ್

Spread the loveಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲೂಕಿನ ಕೆರೆಮನೆ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟ ದಾರುಣ ಘಟನೆ ಜಿಲ್ಲೆಯಾದ್ಯಂತ ಶೋಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ