Breaking News

ಭಾರತದ ಹೆಮ್ಮೆಯ ಉದ್ಯಮಿ ರತನ್‌ ಟಾಟಾ ನಿಧನ!

Spread the love

ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್‌ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ.

ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ ಅಭಿಮಾನಿಗಳು ಒಪ್ಪಿರಲಿಲ್ಲ.

ರತನ್‌ಟಾಟಾ ಅವರನ್ನು ಸೋಮವಾರ ಮಹಾರಾಷ್ಟ್ರದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಾರಂಭದಲ್ಲಿ ಅವರು ಸಾಮಾನ್ಯ ಆರೋಗ್ಯ ಪರೀಕ್ಷೆ ಒಳಪಟ್ಟಿದ್ದಾರೆ ಎಂದೇ ಹೇಳಲಾಗಿತ್ತು. ಅಲ್ಲದೇ ಅವರು ಸಹ ನಾನು ಆರೋಗ್ಯವಾಗಿಯೇ ಇದ್ದೇನೆ. ಚಿಂತಿಸಬೇಡಿ ಎಂದೇ ಹೇಳಿದ್ದರು. ಆದರೆ, ಅವರ ಆರೋಗ್ಯದ ಬಗ್ಗೆ ಅನುಮಾನಗಳು ಮೂಡಿದ್ದವು. ಅದರಂತೆ ಬುಧವಾರ ಸಂಜೆಯ ವೇಳೆಗೆ ಅವರ ಆರೋಗ್ಯ ಕ್ಷೀಣಿಸುತ್ತಿದೆ ಎನ್ನುವ ವರದಿಗಳು ಬರಲು ಪ್ರಾರಂಭಿಸಿತ್ತು. ಬುಧವಾರ ತಡರಾತ್ರಿ ಅವರು ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಖಚಿತಪಡಿಸಿವೆ. ಟಾಟಾ ಸಮೂಹದ ಮುಖ್ಯಸ್ಥ ರತನ್ ಟಾಟಾ ಅವರಿಗೆ 86 ವರ್ಷವಾಗಿತ್ತು. ಅವರು ವಯೋಸಹಜ ಸಮಸ್ಯೆಯಿಂದ ಬಳಲುತ್ತಿದ್ದರು.


Spread the love

About Laxminews 24x7

Check Also

ಬೆಳಗಾವಿ ಡಿಸಿಸಿ ಬ್ಯಾಂಕ್ 4 ಕ್ಷೇತ್ರಗಳ ಫಲಿತಾಂಶ ಪ್ರಕಟ: 15 ದಿನಗಳಲ್ಲಿ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

Spread the love ಬೆಳಗಾವಿ: ಕೋರ್ಟ್ ವ್ಯಾಜ್ಯದ ಹಿನ್ನೆಲೆಯಲ್ಲಿ ವಿಳಂಬವಾಗಿದ್ದ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಬಿಡಿಸಿಸಿ)ನ ನಾಲ್ಕು ಕ್ಷೇತ್ರಗಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ