ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಅಪಹರಣ, ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿರುವ 57ನೇ ಸಿಸಿಎಚ್ ನ್ಯಾಯಾಲಯ ಆದೇಶವನ್ನು ಕಾಯ್ದಿರಿಸಿತು.
ಮುಂದುವರಿದ ವಾದ-ಪ್ರತಿವಾದವನ್ನು ಗುರುವಾರವೂ ಆಲಿಸಿದ ನ್ಯಾಯಾಧೀಶ ಜೈಶಂಕರ್ ಅವರು ಅಕ್ಟೋಬರ್ 14ಕ್ಕೆ ಜಾಮೀನು ಅರ್ಜಿಗೆ ಸಂಬಂಧಿಸಿದ ಆದೇಶವನ್ನು ಪ್ರಕಟಿಸುವುದಾಗಿ ಹೇಳಿದರು.
ಅದೇ ದಿನವೇ, ದರ್ಶನ್ ಆಪ್ತರಾದ ಪವಿತ್ರಾಗೌಡ, ರವಿಶಂಕರ್, ನಾಗರಾಜ್, ಲಕ್ಷ್ಮಣ್ ಹಾಗೂ ದೀಪಕ್ ಅವರ ಜಾಮೀನು ಅರ್ಜಿ ಆದೇಶವೂ ಪ್ರಕಟ ಆಗಲಿದೆ.
ಕೊಲೆ ಪ್ರಕರಣದ ಆರೋಪದ ಅಡಿ ಜೂನ್ 11ರಂದು ದರ್ಶನ್ ಅವರನ್ನು ಬಂಧಿಸಲಾಗಿತ್ತು. ದರ್ಶನ್ ಅವರು ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರ ಪರವಾಗಿ ಸೆ.21ರಂದು ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದರು.
ಈ ಪ್ರಕರಣದಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಪ್ರಸನ್ನಕುಮಾರ್ ಅವರು ವಾದ ಮಂಡಿಸಿದ್ದರು. ಅವರ ವಾದಕ್ಕೆ ಪ್ರತಿಯಾಗಿ ದರ್ಶನ್ ಪರ ವಕೀಲ ಸಿ.ವಿ.ನಾಗೇಶ್ ವಾದಿಸಿದ್ದರು.
Laxmi News 24×7