Breaking News

ವಾರಾಂತ್ಯದ ರಜೆ: ರಸ್ತೆಗಳಲ್ಲಿ ದಟ್ಟಣೆ

Spread the love

ಬೆಂಗಳೂರು: ದಸರಾ ಮಹೋತ್ಸವ ಸಂದರ್ಭದಲ್ಲಿ ವಾರಾಂತ್ಯ ಮೂರು ದಿನಗಳು ರಜೆ ಇರುವುದರಿಂದ ಪ್ರವಾಸ, ಧಾರ್ಮಿಕ ಸ್ಥಳ ಹಾಗೂ ಊರಿಗೆ ತೆರಳುವರ ಸಂಖ್ಯೆ ಹೆಚ್ಚಾಗಿದ್ದು, ನಗರದ ಬಸ್‌ ನಿಲ್ದಾಣಗಳೆಲ್ಲ ಗುರುವಾರ ಪ್ರಯಾಣಿಕರಿಂದ ಭರ್ತಿಯಾಗಿದ್ದವು.

ಬೆಂಗಳೂರು | ವಾರಾಂತ್ಯದ ರಜೆ: ರಸ್ತೆಗಳಲ್ಲಿ ದಟ್ಟಣೆ

ನಗರದಿಂದ ಹೊರಟ ಎಲ್ಲ ಬಸ್‌ಗಳು ಪ್ರಯಾಣಿಕರಿಂದ ತುಂಬಿದ್ದವು.

ಬುಧವಾರ ರಾತ್ರಿಯಿಂದಲೇ ಜನರು ಊರಿನತ್ತ ತೆರಳಿದ್ದು ಕಂಡುಬಂತು. ಕೆಂಪೇಗೌಡ ಬಸ್‌ನಿಲ್ದಾಣ, ಯಶವಂತಪುರ, ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ, ಕಂಟೋನ್ಮೆಂಟ್‌ ಹಾಗೂ ಬೈಯಪ್ಪನಹಳ್ಳಿ ನಿಲ್ದಾಣದಲ್ಲೂ ಪ್ರಯಾಣಿಕರ ದಟ್ಟಣೆಯಿತ್ತು. ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಗಿತ್ತು.

ಖಾಸಗಿ ಬಸ್‌ಗಳಲ್ಲಿ ಪ್ರಯಾಣ ದರವು ದುಬಾರಿಯಾಗಿತ್ತು. ಕೊನೆಯ ಕ್ಷಣದಲ್ಲಿ ಬಂದ ಪ್ರಯಾಣಿಕರಿಗೆ ಸೀಟು ಲಭ್ಯ ಇಲ್ಲ ಎಂಬ ಉತ್ತರ ದೊರೆಯಿತು. ಇದರಿಂದ ಊರಿಗೆ ತೆರಳಲು ಬಂದ ಪ್ರಯಾಣಿಕರು ನಿರಾಸೆಗೆ ಒಳಗಾದರು.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ