ಬೆಂಗಳೂರು : ಕರ್ನಾಟ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕ, ತಮಿಳುನಾಡು, ಕೇರಳ, ಗೋವಾ, ಮಹಾರಾಷ್ಟ್ರ, ಅರುಣಾಚಲ ಪ್ರದೇಶ ಮತ್ತು ಗುಜರಾತ್‌ನಲ್ಲಿ ಇಂದು ಅಂದರೆ ಅಕ್ಟೋಬರ್ 12 ರಂದು ಭಾರೀ ಮಳೆಯಾಗಲಿದೆ ಎಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರ್ನಾಟಕದಲ್ಲಿ ಭಾರೀ ಮಳೆ
ಇತ್ತೀಚಿನ ಮಾಹಿತಿ ಪ್ರಕಾರ, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಇಂದು ಮಳೆ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. .
Laxmi News 24×7