ಕೋಲಾರ: ರಾಜ್ಯ ಸರ್ಕಾರದಿಂದ ಅನ್ನಭಾಗ್ಯ ಫಲಾನುಭವಿಗಳಿಗೆ ಹೆಚ್ಚುವರಿಯಾಗಿ 5 ಕೆಜಿ ಅಕ್ಕಿ ನೀಡುವುದಾಗಿ ಘೋಷಿಸಲಾಗಿತ್ತು. ಆದರೇ ಅಕ್ಕಿ ದೊರೆಯದ ಕಾರಣ, ಅಕ್ಕಿಯ ದರದಲ್ಲಿ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತಿದೆ. ಆದರೇ ಅನ್ನಭಾಗ್ಯ ಯೋಜನೆ ಹಣ ಜಮಾ ಆಗಿಲ್ಲ.

ಇದಕ್ಕೆ ಸರ್ವರ್ ಸಮಸ್ಯೆ ಕಾರಣ, ಮುಂದಿನ ವಾರದಲ್ಲಿ ಜಮಾ ಆಗಲಿದೆ ಎಂಬುದಾಗಿ ಆಹಾರ ಸಚಿವ ವಿ.ಮುನಿಯಪ್ಪ ತಿಳಿಸುವ ಮೂಲಕ, ಗುಡ್ ನ್ಯೂಸ್ ನೀಡಿದ್ದಾರೆ.
ಕೋಲಾರದ ಕಾಂಗ್ರೆಸ್ ನಗರಾಧ್ಯಕ್ಷ ಪ್ರಸಾದ್ ಬಾಬು ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಅನ್ನಭಾಗ್ಯ ಯೋಜನೆಯ ಹಣ ಈವರೆಗೆ ಬಿಡುಗಡೆಯಾಗಿಲ್ಲ. ಈ ಹಣವನ್ನು ಪ್ರತಿ ತಿಂಗಳು 10ರಂದು ಬಿಡುಗಡೆ ಮಾಡಲಾಗುತ್ತಿತ್ತು. ಸರ್ವರ್ ಸಮಸ್ಯೆಯಿಂದ ಈಗ ಬಿಡುಗಡೆ ಮಾಡಲಾಗಿಲ್ಲ. ಮುಂದಿನ ವಾರ ಬಿಡುಗಡೆಯಾಗಲಿದೆ ಎಂದು ತಿಳಿಸಿದರು.
Laxmi News 24×7