ಕೋಲಾರ, ಅಕ್ಟೋಬರ್ 11:ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಯೋಜನೆಗಳ ಪೈಕಿ ಅನ್ನಭಾಗ್ಯ ಯೋಜನೆ ಮಹತ್ವದ ಯೋಜನೆಯಾಗಿದೆ. ಈ ಅನ್ನ ಭಾಗ್ಯ ಯೋಜನೆಯ ಡಿಬಿಟಿ ಹಣವನ್ನ ಸರ್ಕಾರ ಎರಡು ತಿಂಗಳಿನಿಂದ ಕೊಟ್ಟಿರಲಿಲ್ಲ. ಹೀಗಾಗಿ ಬಿಪಿಎಲ್ ಫಲಾನುಭವಿಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ಇದೀಗ ಹಣ ಬಿಡುಗಡೆ ಕುರಿತು ಮಹತ್ವದ ಮಾಹಿತಿಯನ್ನ ಸಚಿವ ಕೆ ಎಚ್ ಮುನಿಯಪ್ಪ ಅವರು ನೀಡಿದ್ದಾರೆ.
ಈ ಕುರಿತು ಕೋಲಾರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಸಚಿವ ಕೆ ಎಚ್ ಮುನಿಯಪ್ಪ ಅವರು, ಪ್ರತಿ ತಿಂಗಳು 10ರಂದು ಹಣ ಬಿಡುಗಡೆಯಾಗುತ್ತಿತ್ತು. ಆದರೆ ಸರ್ವರ್ ಸಮಸ್ಯೆಯಿಂದ ಹಣ ಬಿಡುಗಡೆ ವಿಳಂಬವಾಗಿದೆ. ಬಾಕಿ ಹಣ ಮುಂದಿನ ವಾರ ಬಿಡುಗಡೆಯಾಗಲಿದೆ ಎಂದು ಹೇಳಿದ್ದಾರೆ. ಅಲ್ಲದೇ ಬಿಪಿಎಲ್ ಅರ್ಹತೆ ಪರಿಶೀಲಿಸಿ ಅನರ್ಹರನ್ನ ಎಪಿಎಲ್ಗೆ ವರ್ಗಾವಣೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಬಿಪಿಎಲ್ ಕಾರ್ಡ್‌ದಾರ ಕುಟುಂಬಗಳ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ ಬದಲಾಗಿ ಸರ್ಕಾರ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡುತ್ತಿತ್ತು. ಪ್ರತಿ ಕೆಜಿ ಅಕ್ಕಿಗೆ ತಲಾ 34ರೂ.ನಂತೆ ಒಟ್ಟು 5 ಕೆಜಿ ಅಕ್ಕಿಗೆ 170ರೂ ನೀಡಲಾಗುತ್ತಿತ್ತು. ಅದರಂತೆ ಫಲಾನುಭವಿಗಳ ಖಾತೆಗೆ ಹಣ ಕೂಡ ಜಮಾವಣೆಯಾಗುತ್ತಿತ್ತು. ಆದರೆ, ಕಳೆದ ಎರಡು ತಿಂಗಳಿಂದ ಯಾವುದೇ ಹಣ ಪಾವತಿ ಆಗಿಲ್ಲ. ಹೀಗಾಗಿ ಫಲಾನುಭವಿಗಳು ಪ್ರತಿದಿನ ಬೆಂಗಳೂರು ಒನ್ ಹಾಗೂ ಬ್ಯಾಂಕ್ಗಳನ್ನ ಸುತ್ತುವಂತ್ತಾಗಿದ್ದು, ಅಲ್ಲೇ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಸಚಿವರು ಹಣ ಬಿಡುಗಡೆ ಕುರಿತು ಮಾಹಿತಿ ನೀಡಿದ್ದಾರೆ.
Laxmi News 24×7