Breaking News

6ರಿಂದ ಬೆಳಗಾವಿ-ಮನಗೂರು ರೈಲು ಸಂಚಾರ : ಈರಣ್ಣ ಕಡಾಡಿ

Spread the love

ಮೂಡಲಗಿ: ‘ಬೆಳಗಾವಿ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಂತೆ ಬೆಳಗಾವಿ-ಮನಗೂರು ವಿಶೇಷ ಎಕ್ಸ್‌ಪ್ರೆಸ್‌ ರೈಲು ಸಂಚಾರವು ಅಕ್ಟೋಬರ್‌ 16ರಿಂದ ಪ್ರಾರಂಭವಾಗಲಿದೆ ಎಂದು ನೈರುತ್ಯ ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ’ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತಿಳಿಸಿದ್ದಾರೆ.

 

ಹಬ್ಬದಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ನಿವಾರಿಸುವ ಉದ್ದೇಶದಿಂದ ವಿಶೇಷ ಎಕ್ಸ್‌ಪ್ರೆಸ್‌ ರೈಲಿನ ಸಂಚಾರಕ್ಕೆ ರೈಲ್ವೆ ಇಲಾಖೆ ಅನುಮೋದನೆ ನೀಡಿದೆ. ಬೆಳಗಾವಿ-ಮನಗೂರು (07335) ಎಕ್ಸ್‌ಪ್ರೆಸ್‌ ಅ.16ರಿಂದ 2025ರ ಮಾರ್ಚ್‌ 30ರವರೆಗೆ ವಾರದಲ್ಲಿ ನಾಲ್ಕು ಬಾರಿ (ಭಾನುವಾರ, ಮಂಗಳವಾರ, ಬುಧವಾರ ಹಾಗೂ ಶನಿವಾರ) ಸಂಚರಿಸಲಿದೆ. ಮನಗೂರು-ಬೆಳಗಾವಿ (07336) ರೈಲು ಅ.17ರಿಂದ 2025ರ ಮಾರ್ಚ್‌ 31ರವರೆಗೆ ವಾರದಲ್ಲಿ ನಾಲ್ಕು ಬಾರಿ (ಸೋಮವಾರ, ಬುಧವಾರ, ಗುರುವಾರ ಮತ್ತು ಭಾನುವಾರ) ಸಂಚರಿಸಲಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಟನಲ್ ರಸ್ತೆ ಯೋಜನೆಗೆ ಬಿಜೆಪಿ ವಿರೋಧ ರಾಜಕೀಯಪ್ರೇರಿತ: ಸಿಎಂ ಸಿದ್ದರಾಮಯ್ಯ

Spread the loveಬೆಂಗಳೂರು: ಟನಲ್ ರಸ್ತೆ ಯೋಜನೆಯನ್ನು ಬಿಜೆಪಿಯವರು ರಾಜಕೀಯ ಉದ್ದೇಶಕ್ಕಾಗಿ ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು. ಟನಲ್ ರಸ್ತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ