Breaking News

ಇಂದು ಸಿಎಂ ಸಿದ್ದರಾಮಯ್ಯ `ಬಳ್ಳಾರಿ ಜಿಲ್ಲೆ’ ಪ್ರವಾಸ

Spread the love

ಳ್ಳಾರಿ : ಅ.14 ರ ಇಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊರಟು ಬೆಳಿಗ್ಗೆ 10.50 ಗಂಟೆಗೆ ತೋರಣಗಲ್ಲಿನ ಜಿಂದಾಲ್ ಏರ್‌ಸ್ಟ್ರಿಪ್ ಗೆ ಆಗಮಿಸುವರು.

ಬಳಿಕ ಮುಖ್ಯಮಂತ್ರಿಗಳು ಬೆಳಿಗ್ಗೆ 11.15 ಗಂಟೆಗೆ ಸಂಡೂರಿಗೆ ಆಗಮಿಸಿ, ಬಳ್ಳಾರಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಇವರ ವತಿಯಿಂದ ಸಂಡೂರು ಪಟ್ಟಣದ ಅಗ್ನಿಶಾಮಕದಳ ಮುಂಭಾಗದ ವಿಶ್ವಾಸ್ ಯು.ಲಾಡ್ ಮೈದಾನದ ಆವರಣದಲ್ಲಿ ಆಯೋಜಿಸಿರುವ ಸಂಡೂರು ತಾಲ್ಲೂಕಿನ ಸಾಧನಾ ಸಮಾವೇಶ, ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ವಿವಿಧ ಯೋಜನೆಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.

 

ಮುಖ್ಯಮಂತ್ರಿಗಳು ಅದೇ ದಿನ ಮಧ್ಯಾಹ್ನ 03.55 ಗಂಟೆಗೆ ತೋರಣಗಲ್ಲಿಗೆ ತೆರಳಿ ಇಲ್ಲಿನ ಜಿಂದಾಲ್ ಏರ್‌ಸ್ಟ್ರಿಪ್ ನಿಂದ ವಿಶೇಷ ವಿಮಾನ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಕರ್ತವ್ಯದಲ್ಲಿದ್ದಾಗಲೇ ಕುಸಿದು ಬಿದ್ದು ಗ್ರಾ.ಪಂ ಸಿಬ್ಬಂದಿ ಸಾವು

Spread the loveಬಳ್ಳಾರಿ: ಕರ್ತವ್ಯನಿರತ ಗ್ರಾ.ಪಂ ಸಿಬ್ಬಂದಿ  ಹಠಾತ್ತನೆ ಕುಸಿದು ಬಿದ್ದು, ಮೃತಪಟ್ಟಿರುವ ಘಟನೆ ವಿಜಯನಗರ  ಡಾದ ಗ್ರಾಮ ಪಂಚಾಯತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ