Breaking News

ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಸೊಂಕಿತರ ಚಿಕಿತ್ಸೆ………..

Spread the love

ಬೆಂಗಳೂರು, ಜೂ.19- ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಸೊಂಕಿತರ ಚಿಕಿತ್ಸೆಗೆ ಹೆಚ್ಚಿನ ದರ ನಿಗದಿಪಡಿಸುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೂತನ ಮಾರ್ಗ ಸೂಚಿಯನ್ನು ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ನೂತನ ದರ ಜಾರಿಯಾಗಲಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿರುವ ನೂತನ ಮಾರ್ಗಸೂಚಿಯಂತೆ ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳು ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಒಂದೇ ಒಂದು ನಯಾ ಪೈಸೆ ಹೆಚ್ಚುವರಿ ಹಣ ಪಡೆಯುವಂತಿಲ್

ಒಂದು ವೇಳೆ ಸರ್ಕಾರ ನಿಗದಿ ಪಡಿಸಿದ ದರಕ್ಕಿಂತ ಹೆಚ್ಚಿನ ದರ ಪಡೆದರೆ ಅಂತಹ ಆಸ್ಪತ್ರೆಗಳ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳುವ ಅವಕಾಶ ನೂತನ ಮಾರ್ಗ ಸೂಚಿಯಲ್ಲಿದೆ.

ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಂತರ ಸರ್ಕಾರ ಅಕೃತವಾಗಿ ಆದೇಶ ಹೊರಡಿಸಲಿದೆ. ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ನೂತನ ಮಾರ್ಗ ಸೂಚಿಯಲ್ಲಿ ಬಿಬಿಎಂಪಿ, ಜಿಲ್ಲಾ ಆಸ್ಪತ್ರೆಗಳು ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಕೊರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡಿದರೆ ಸರ್ಕಾರ ನಿಗದಿ ಮಾಡಿರುವ ದರವನ್ನೇ ಪಡೆಯಬೇಕು.

ಈ ಪ್ರಕಾರ ಗಂಟಲು ದ್ರವ ಪರೀಕ್ಷೆಗೆ 2600ರೂ., ಜನರಲ್ ವಾರ್ಡ್ ಚಿಕಿತ್ಸೆಗೆ 5200, ಆಕ್ಸಿಜನ್‍ಗೆ 7500ರೂ., ಐಸುಲೇಷನ್ ವಾರ್ಡ್ ಒಂದು ದಿನಕ್ಕೆ 8500ರೂ., ಐಸಿಯು/ವೆಂಟಿಲೇಟರ್‍ಗೆ 12 ಸಾವಿರ ರೂ. ದರ ನಿಗದಿ ಪಡಿಸಲಾಗಿದೆ.

ನೂತನ ಮಾರ್ಗ ಸೂಚಿಯಲ್ಲಿ ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿ ಹೊಂದಿದವರಿಗೆ ಉಚಿತವಾಗಿ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡಬೇಕು. ರೋಗಿಗೆ ತಗಲುವ ಚಿಕಿತ್ಸಾ ವೆಚ್ಚವನ್ನು ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರ ಭರಿಸಲಿದೆ.

ಮೂಲಗಳ ಪ್ರಕಾರ ಮುಂದಿನ ದಿನಗಳಲ್ಲಿ ಯಾರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಾರೋ ಅವರೆಲ್ಲರಿಗೂ ಸರ್ಕಾರವೇ ಚಿಕಿತ್ಸಾ ವೆಚ್ಚವನ್ನು ಭರಿಸಲಿದೆ ಎಂದು ತಿಳಿದು ಬಂದಿದೆ.

ಖಾಸಗಿ ಆಸ್ಪತ್ರೆಗಳು ಕೊರೊನಾ ಚಿಕಿತ್ಸೆಗೆ ಹೆಚ್ಚಿನ ದರ ವಸೂಲಿ ಮಾಡುತ್ತಿದ್ದವು ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸರ್ಕಾರ ಈ ದರಗಳನ್ನು ನಿಗದಿ ಪಡಿಸಿದೆ.

ಮುಂದಿನ ಸಂಪುಟದಲ್ಲಿ ನಾವು ಚರ್ಚೆ ಮಾಡಿ ಇದನ್ನು ಅಕೃತವಾಗಿ ಜಾರಿ ಮಾಡಲಿದ್ದೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಎಪಿಎಲ್, ಬಿಪಿಎಲ್ ಸೇರಿದಂತೆ ಪ್ರತಿಯೊಬ್ಬರಿಗೂ ಉಚಿತ ಚಿಕಿತ್ಸೆ ನೀಡುವ ಉದ್ದೇಶ ಇಟ್ಟುಕೊಂಡಿದ್ದೇವೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜತೆ ಚರ್ಚೆ ಮಾಡಿ ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಸಂತಸ: ಇನ್ನು ಸರ್ಕಾರ ನಿಗದಿ ಪಡಿಸಿರುವ ನೂತನ ದರಕ್ಕೆ ಭಾರತೀಯ ವೈದ್ಯಕೀಯ ಪರಿಷತ್ (ಐಎಂಎ) ಸಂತಸ ವ್ಯಕ್ತಪಡಿಸಿದೆ. ನಮಗೆ ಸರ್ಕಾರ ನಿಗದಿ ಪಡಿಸಿರುವ ದರ ತೃಪ್ತಿ ತಂದಿದೆ. ಈ ದರದಲ್ಲೇ ಎಲ್ಲರಿಗೂ ಚಿಕಿತ್ಸೆ ನೀಡುತ್ತೇವೆ.

ಯಾವುದೇ ಕಾರಣಕ್ಕೂ ರೋಗಿಗಳಿಂದ ಹೆಚ್ಚುವರಿ ಹಣ ತೆಗೆದುಕೊಳ್ಳುವುದಿಲ್ಲ. ಇರುವ ದರದಲ್ಲೇ ಪ್ರತಿಯೊಬ್ಬರಿಗೂ ಉತ್ತಮವಾದ ಚಿಕಿತ್ಸೆ ನೀಡುತ್ತೇವೆ ಎಂದು ಐಎಂಎ ಪದಾಕಾರಿಗಳು ತಿಳಿಸಿದ್ದಾರೆ.

 


Spread the love

About Laxminews 24x7

Check Also

ಕುರ್ಚಿ ಆಸೆಗಾಗಿ ಡಿಕೆಶಿ ವಿರೋಧಿ ಬಣದ ನಾಯಕರನ್ನು ಹೊಂಚು ಹಾಕಿ, ಸಂಚು ರೂಪಿಸಿ ಮುಗಿಸುತ್ತಿದ್ದಾರೆ: ಜೆಡಿಎಸ್ ಕಿಡಿ

Spread the loveಬೆಂಗಳೂರು: ಕುರ್ಚಿ ಆಸೆಗಾಗಿ ಡಿಸಿಎಂ ಡಿಕೆ ಶಿವಕುಮಾರ್  ಅವರು ತಮ್ಮ ವಿರೋಧಿ ಬಣದ ನಾಯಕರನ್ನು ಹೊಂಚು ಹಾಕಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ