Breaking News

ಅಲ್ಪಸಂಖ್ಯಾತರ ಕಲ್ಯಾಣ ಮಾಡವುದು ತಪ್ಪೇ..?: ಎಚ್.ಕೆ. ಪಾಟೀಲ ಪ್ರಶ್ನೆ

Spread the love

ಹುಬ್ಬಳ್ಳಿ: ಬಿಜೆಪಿ ಅನಾವಶ್ಯಕ ರಾಜಕಾರಣ ಮಾಡುತ್ತಿರುವುದು ಸೂಕ್ತವಲ್ಲ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಳೇಹುಬ್ಬಳ್ಳಿ ಗಲಭೆ ಪ್ರಕರಣವು ರಾಜಕೀಯ ಪ್ರೇರಿತವಾಗಿದೆ. ಈ ಹಿನ್ನೆಲೆ ಸರ್ಕಾರ ಪರಮಾರ್ಶೆ ಮಾಡಿತು.

ಈ ವಿಚಾರ ಸಚಿವ ಸಂಪುಟದ ಉಪ ಸಮಿತಿ, ಅಧಿಕಾರಿಗಳ ಅಭಿಪ್ರಾಯ ಸಂಗ್ರಹ ಹಾಗೂ ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳುವಂತದಾಗಿದೆ ಎಂದು ಹೇಳಿದರು.

ನಾವು ಅಲ್ಪಸಂಖ್ಯಾತ ಓಲೈಕೆ ಮಾಡುತ್ತಿಲ್ಲ. ಬಿಜೆಪಿ ಆ ರೀತಿ ಬಿಂಬಿಸುವ ಕೆಲಸ ಮಾಡುತ್ತಿದೆ. ಅಲ್ಪಸಂಖ್ಯಾತ ಕಲ್ಯಾಣ ಮಾಡವುದು ತಪ್ಪಾ ಎಂದು ಪ್ರಶ್ನಿಸಿದರು.

ನಮಗೆಲ್ಲರೂ ಭಾರತೀಯರೇ. ಸಮಾಜ ಒಡೆದಾಳುವ ಮಾತುಗಳಿಂದ ರಾಷ್ಟ್ರಕಟ್ಟಲು ಆಗಲ್ಲ.‌ ಬಿಜೆಪಿ ತಮ್ಮ ಕಾಲದಲ್ಲಿ ಎಷ್ಟು ಕೇಸ್ ವಾಪಸ್ಸು ಪಡೆದಿದ್ದಾರೆ. ರಾಜಕೀಯ ಪ್ರೇರಿತ ಕೇಸ್ ದಾಖಲಾಗಿದ್ದರೆ ಅವುಗಳನ್ನು ವಿಮರ್ಶೆ ಮಾಡಿ ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡಿ ವಾಪಸು ಪಡೆಯುವ ಅವಕಾಶವಿದೆ. ಅನಾವಶ್ಯಕವಾಗಿ ರಾಜಕೀಯ ಮಾಡುತ್ತಿರುವುದು ಸೂಕ್ತವಲ್ಲ ಎಂದರು.


Spread the love

About Laxminews 24x7

Check Also

ಮೊದಲ ಪೋಕ್ಸೋ ಕೇಸ್​​ನಲ್ಲಿ ಮುರುಘಾ ಶ್ರೀ ನಿರ್ದೋಷಿ ಎಂದು ಕೋರ್ಟ್ ತೀರ್ಪು: ಕೇಸ್​ನಿಂದ ಮೂವರು ಖುಲಾಸೆ

Spread the loveಚಿತ್ರದುರ್ಗ: ಸಾಕ್ಷ್ಯಾಧಾರಗಳ ಕೊರತೆಯ ಹಿನ್ನೆಲೆಯಲ್ಲಿ ಮೊದಲ ಪೋಕ್ಸೋ(POCSO) ಪ್ರಕರಣದಲ್ಲಿ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ನಿರ್ದೋಷಿ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ